Advertisement

ರೈತರಿಗೆ ಕೃಷಿ ಯಂತ್ರೋಪಕರಣ ಬಳಕೆ ಅರಿವು ಮೂಡಿಸಿ

06:26 PM Sep 26, 2020 | Suhan S |

ಯಾದಗಿರಿ: ರೈತರು ರಸ್ತೆ ಬದಿಯಲ್ಲಿ ರಾಶಿ ಮಾಡುವುದನ್ನು ತಪ್ಪಿಸಿ, ವೈಜ್ಞಾನಿಕ ಕೃಷಿ ಯಂತ್ರಧಾರೆಯ ಉಪಕರಣಗಳನ್ನು ಬಳಸುವ ಮೂಲಕ ಕೃಷಿ ಉತ್ಪನ್ನಗಳ ರಾಶಿ ಮಾಡುವಂತೆ ರೈತರಲ್ಲಿ ಅರಿವು ಮೂಡಿಸಬೇಕು ಎಂದು ಜಿಪಂ ಸಿಇಒ ಶಿಲ್ಪಾ ಶರ್ಮಾ ಸೂಚಿಸಿದರು.

Advertisement

ಜಿಪಂ ಸಭಾಂಗಣದಲ್ಲಿ ಕೃಷಿ ಇಲಾಖೆಯಿಂದ ಗುರುವಾರ ನಡೆದ 2020-21ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ, ಕೃಷಿ ಯಂತ್ರಧಾರೆ ಹಾಗೂ ತಂತ್ರಜ್ಞಾನ ರಾಷ್ಟ್ರೀಯ ಮಿಷನ್‌ ಆತ್ಮ ಯೋಜನೆಯ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿ ಯಂತ್ರಧಾರೆ ಮೂಲಕ ಹೋಬಳಿ ಮಟ್ಟದಲ್ಲಿ ಚಾರಿಟೇಬಲ್‌ ಟ್ರಸ್ಟ್‌, ಸರ್ಕಾರೇತರ ಸಂಸ್ಥೆಗಳು, ಯಂತ್ರೋಪಕರಣಗಳ ಉತ್ಪಾದಕ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕೇಂದ್ರಗಳನ್ನು ಸ್ಥಾಪಿಸಿ ಸ್ಥಳೀಯ ಬೆಳೆಗಳಿಗೆ ಅನುಗುಣವಾಗಿ ಹಾಗೂ ರೈತರಿಂದ ಬೇಡಿಕೆ ಇರುವ ಯಂತ್ರೋಪಕರಣಗಳಿಗೆ ಜಿಲ್ಲಾ ಮಟ್ಟದ ಸಮಿತಿಯಿಂದ ಅನಮೋದನೆ ಪಡೆದು ಕೃಷಿ ಯಂತ್ರ ಧಾರೆ ಕೇಂದ್ರಗಳಲ್ಲಿ ದಾಸ್ತಾನು ಮಾಡಿ ರೈತರಿಗೆ ಕಡಿಮೆ ಬಾಡಿಗೆ ದರದಲ್ಲಿ ಒದಗಿಸಲಾಗುವುದು. ಭೂಮಿ ಸಿದ್ಧತೆಯಿಂದ ಕೊಯ್ಲು ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ಉಪಯುಕ್ತವಾಗುವ ವಿವಿಧ ರೀತಿಯ ಕೃಷಿ ಯಂತ್ರೋಪಕರಣಗಳನ್ನು ನೀಡಲಾಗುವುದು.

ಯಂತ್ರಗಳ ಬಳಕೆಯಿಂದ ಕೃಷಿಯಲ್ಲಿ ಅನವಶ್ಯಕ ವೆಚ್ಚ ಕಡಿಮೆ ಆಗಲಿದೆ. ಸಮಯ ಉಳಿತಾಯ ಆಗುತ್ತದೆ ಎಂದರು. ಕೃಷಿ ಇಲಾಖೆ ಅಧಿಕಾರಿಗಳು ರೈತರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕು ಎಂದು ಸೂಚಿಸಿದರು.

ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್‌., ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಬಾಬು, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಹೇಶ, ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಡಾ| ಉಮೇಶ, ತೋಟಗಾರಿಕೆ ವಿಸ್ತರಣಾ ಘಟಕದ ಮುಖ್ಯಸ್ಥರಾದ ಡಾ| ರೇವಣಪ್ಪ ಸೇರಿದಂತೆ ಹಲವರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next