Advertisement

ಉತ್ತಮ ಆಲೋಚನೆ ರೂಢಿಸಿಕೊಳ್ಳಿ

12:34 PM Nov 14, 2018 | Team Udayavani |

ಮೈಸೂರು: ಹೆಣ್ಣುಮಕ್ಕಳು ಉನ್ನತ ಶಿಕ್ಷಣ ಪಡೆಯುವ ಜತೆಗೆ ಪ್ರಯೋಗಶೀಲ, ನಿರಂತರ ಅಭ್ಯಾಸ, ಸ್ಪರ್ಧಾತ್ಮಕ, ಬದ್ಧತೆ, ಉತ್ತಮ ಆಲೋಚನೆಗಳನ್ನು ರೂಢಿಸಿಕೊಂಡು ಉನ್ನತ ಸ್ಥಾನಕ್ಕೇರಬೇಕಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಡಾ.ಎನ್‌. ಮಂಜುಳಾ ಸಲಹೆ ನೀಡಿದರು.

Advertisement

ನಗರದ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್‌ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ನಡೆದ 11ನೇ ಪದವೀಧರ ದಿನಾಚರಣೆಯಲ್ಲಿ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಶೇ.27.8 ಮಂದಿ ಉನ್ನತ ಶಿಕ್ಷಣ ಪಡೆಯುತ್ತಿದ್ದು, ಇದರಲ್ಲಿ ಮಹಿಳೆಯರ ಪ್ರಮಾಣ ಶೇ. 8.5 ಇದೆ.

ಉನ್ನತ ಶಿಕ್ಷಣ ಪಡೆದ ಮಹಿಳೆಯರಿಂದ ಸಮಾಜ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದು, ಹೆಣ್ಣುಮಕ್ಕಳು ತಮ್ಮ ಭವಿಷ್ಯವನ್ನು ಭದ್ರವಾಗಿ ರೂಪಿಸಿಕೊಳ್ಳಬೇಕಿದೆ. ಪ್ರಸ್ತುತ ಸಂದರ್ಭದಲ್ಲಿ ಎಲ್ಲರಿಗೂ ಸಾಕಷ್ಟು ಅವಕಾಶಗಳಿದ್ದು, ಇದನ್ನು ಬಳಸಿಕೊಳ್ಳುವ ಮೂಲಕ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆದು, ಉನ್ನತ ಹುದ್ದೆ ಹಾಗೂ ಪ್ರಭಾವಿ ಉದ್ಯಮಿಯಾಗಿ ಬೆಳೆಯಬೇಕಿದೆ ಎಂದು ಹೇಳಿದರು. 

ಉನ್ನತ ಶಿಕ್ಷಣ: ಹೆಣ್ಣುಮಕ್ಕಳು ಉನ್ನತ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಜತೆಗೆ ಇತರರು ಭವಿಷ್ಯ ರೂಪಿಸಿಕೊಳ್ಳಲು ಕೊಡುಗೆ ನೀಡಬೇಕಿದೆ. ಯಾವುದೇ ಸಂದರ್ಭದಲ್ಲೂ ನೈತಿಕತೆ ಹಾಗೂ ನಾಗರಿಕ ಗುಣಗಳನ್ನು ಕಳೆದುಕೊಳ್ಳದೆ ಮುನ್ನಡೆಯುವ ಮನಸ್ಥಿತಿ ಮೈಗೂಡಿಸಿಕೊಳ್ಳಬೇಕಿದೆ.

ಒಂದು ಕಾಲದಲ್ಲಿ ಮಹಿಳೆಯರು ಉನ್ನತ ಶಿಕ್ಷಣ ಪಡೆಯುವುದು ಬಹಳ ಕಷ್ಟಕರವಾಗಿತ್ತು. ಆದರೆ ಜೆಎಸ್‌ಎಸ್‌ ಸಂಸ್ಥೆಗಳು ಹೆಣ್ಣುಮಕ್ಕಳನ್ನು ಪೋÅತ್ಸಾಹಿಸಿ, ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವುದಕ್ಕೆ ಕಾರಣವಾಗಿವೆ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಜೆಎಸ್‌ಎಸ್‌ ಶಿಕ್ಷಣ ಸಂಸ್ಥೆ ಗಮನ ಸೆಳೆದಿದೆ ಎಂದು ಶ್ಲಾ ಸಿದರು.

Advertisement

ಪದವಿ ಪ್ರದಾನ: ಸಮಾರಂಭದ ಅಂಗವಾಗಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಸೇರಿದಂತೆ 641 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ 2017-18 ಸಾಲಿನಲ್ಲಿ 505 ಸ್ನಾತಕ ಪದವೀಧರರು, 136 ಸ್ನಾತಕೋತ್ತರ ವಿದ್ಯಾರ್ಥಿಗಳು ಪದವಿ ಪಡೆದರು.

ಸ್ನಾತಕ ಪದವಿಯಲ್ಲಿ 274 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 192 ಪ್ರಥಮ ಶ್ರೇಣಿ, 38 ದ್ವಿತೀಯ ಶ್ರೇಣಿ, ಓರ್ವ ವಿದ್ಯಾರ್ಥಿ ಸಾಮಾನ್ಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ 8 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 127 ಪ್ರಥಮ ಶ್ರೇಣಿ, ಒಬ್ಬರು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇದೇ ಸಂದರ್ಭದಲ್ಲಿ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿನಿಯರಿಗೆ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಜೆಎಸ್‌ಎಸ್‌ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರ ಮಠ, ಶೈಕ್ಷಣಿಕ ಡೀನ್‌ ಡಾ.ಎಚ್‌.ಬಿ.ಸುರೇಶ್‌, ಪ್ರಾಂಶುಪಾಲ ಡಾ.ಕೆ.ವಿ.ಸುರೇಶ್‌, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ.ಜಿ.ಆರ್‌.ಶಿವಮೂರ್ತಿ ಮತ್ತಿತರರು ಹಾಜರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next