Advertisement

ಆರೋಗ್ಯ ಮಾಹಿತಿ ಕಾರ್ಯ ಸಮರ್ಪಕವಾಗಿ ಮಾಡಿ

11:55 AM Jul 12, 2020 | Suhan S |

ಧಾರವಾಡ: ಕೋವಿಡ್‌-19 ಸೋಂಕು ದೃಢಪಟ್ಟು, ಸೋಂಕಿನ ಲಕ್ಷಣಗಳು ಇಲ್ಲದಿರುವ ವ್ಯಕ್ತಿಗಳಿಗೂ ಹೋಂ ಐಸೋಲೇಷನ್‌ ಮತ್ತು ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ಇಂತಹ ಸೋಂಕಿತರ ಆರೋಗ್ಯದ ಬಗ್ಗೆ ವೈದ್ಯಕೀಯ ತಂಡ ನಿರಂತರವಾಗಿ ಸಂಪರ್ಕಿಸಿ ಮಾಹಿತಿ ನೀಡುವ ಕಾರ್ಯವನ್ನು ಸಮರ್ಪಕವಾಗಿ ಮಾಡಬೇಕೆಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಆರೋಗ್ಯ ಕಾರ್ಯಪಡೆಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೋಂ ಐಸೋಲೇಶನ್‌ ಮತ್ತು ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುವ ಸೋಂಕಿತರು ಪಾಲಿಸಬೇಕಾದ ಕ್ರಮಗಳ ಬಗ್ಗೆ ವಿಡಿಯೋ ಸಂದೇಶ ಸಿದ್ಧಪಡಿಸಿ ತಿಳಿವಳಿಕೆ ಮೂಡಿಸಬೇಕಿದೆ. ರೋಗಿಗಳ ಸ್ಥಳಾಂತರಕ್ಕೆ ನಿಗದಿ ಮಾಡಿರುವ ಆಂಬ್ಯುಲನ್ಸ್‌ಗಳ ಮೂಲಕ ರೋಗಿಗಳ ವಾಸಸ್ಥಳದಿಂದ ಆಸ್ಪತ್ರೆಗೆ ಕರೆದು ತರುವ ಮತ್ತು ಗುಣಮುಖರಾಗಿ ಬಿಡುಗಡೆಯಾಗುವ ವ್ಯಕ್ತಿಗಳ ಮನೆ ತಲುಪಿಸುವ ಕಾರ್ಯ ಯೋಜಿತ ರೀತಿಯಲ್ಲಿ ನಿರ್ವಹಿಸಲು ರಚಿಸಿರುವ ತಂಡ ಸದಾ ಕಾಲ ಸನ್ನದ್ಧವಾಗಿರಬೇಕು. ಕೋವಿಡ್‌ ತಪಾಸಣೆ ಪ್ರಯೋಗಾಲಯ ವರದಿ ನೀಡುವ ಕಾರ್ಯವನ್ನು ಕಿಮ್ಸ್‌ ಇನ್ನಷ್ಟು ತ್ವರಿತಗೊಳಿಸಬೇಕು. ಅಗತ್ಯ ಬಿದ್ದರೆ ತಾಲೂಕು ಕೇಂದ್ರಗಳಲ್ಲೂ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪಿಸಿ, ಲಕ್ಷಣ ರಹಿತ ರೋಗಿಗಳಿಗೆ ಅಲ್ಲಿಯೇ ಚಿಕಿತ್ಸೆ ನೀಡಲಾಗುವುದು. ಆಯಾ ತಹಸೀಲ್ದಾರರು ಸ್ಥಳೀಯವಾಗಿ ಆಸ್ಪತ್ರೆ,ವಸತಿ ಶಾಲೆಗಳಲ್ಲಿ, ಹಾಸಿಗೆಗಳು, ಆಹಾರ ಪೂರೈಕೆ ವ್ಯವಸ್ಥೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕೆಂದು ಸೂಚಿಸಿದರು.

ಜಿಪಂ ಸಿಇಒ ಡಾ|ಬಿ.ಸಿ.ಸತೀಶ್‌ ಮಾತನಾಡಿ, ತಾಲೂಕು ಮಟ್ಟದಿಂದ ಕೋವಿಡ್‌ ಕೇರ್‌ ಸೆಂಟರ್‌ಗಳ ಆರಂಭಿಸುವ ಕಾರ್ಯದಲ್ಲಿ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿಗಳು, ನರೇಗಾ ಸಹಾಯಕ ನಿರ್ದೇಶಕರು ಭಾಗಿಯಾಗಲಿದ್ದಾರೆ. ಜಿಲ್ಲೆಯಲ್ಲಿ ಲಭ್ಯವಿರುವ ಎಲ್ಲಾ ವಸತಿ ಶಾಲೆ, ವೈದ್ಯಕೀಯ, ಅರೆ ವೈದ್ಯಕೀಯ ಮಾನವ ಸಂಪನ್ಮೂಲ ಸಮರ್ಥ ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದರು.

ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ಇಬ್ರಾಹಿಂ ಮೈಗೂರ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಮಹ್ಮದ್‌ ಜುಬೇರ್‌, ಮಹಾನಗರ ಪಾಲಿಕೆ ಉಪ ಆಯುಕ್ತ ಅಜೀಜ್‌ ದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಡಾ|ಯಶವಂತ ಮದೀನಕರ್‌ ಸೇರಿದಂತೆ ಹಿರಿಯ ವೈದ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು

Advertisement

Udayavani is now on Telegram. Click here to join our channel and stay updated with the latest news.

Next