ಕಲಬುರಗಿ: ಹಿತವಾಗಿ, ಮಿತವಾಗಿ ಆಹಾರ ಸೇವಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುವುದರ ಜತೆಗೆ ವಿದ್ಯಾರ್ಥಿದೆಸೆಯಲ್ಲಿಯೆ ಶಾರೀರಿಕ, ಬೌದ್ಧಿಕ ಮತ್ತು ಆಧ್ಯಾತ್ಮಿಕ ಅಂಶಗಳನ್ನು ಬೆಳೆಸಿಕೊಳ್ಳಬೇಕು ಎಂದು ಶರಣ ಬಸವ ವಿಶ್ವವಿದ್ಯಾಲಯ ಕುಲಾಧಿಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಸಲಹೆ ನೀಡಿದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ದೊಡ್ಡಪ್ಪ ಅಪ್ಪಾ ಸಭಾ ಮಂಟಪ್ಪದಲ್ಲಿ ಹಮ್ಮಿಕೊಂಡಿದ್ದ ಅಂತರ ವಿಶ್ವವಿದ್ಯಾಲಯ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ಪ್ರದಾನ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಹೆಚ್ಚಾಗಿ ಹಾಲು, ಹಣ್ಣು ಕಾಯಿಪಲ್ಯೆ ಸೇವಿಸಿ. ಯೋಗಾಸಾನ, ಸೂರ್ಯ ನಮಸ್ಕಾರ ಮಾಡುವ ಮೂಲಕ ಸದೃಢ ದೇಹ ಬೆಳಸಿಕೊಳ್ಳಿ ಎಂದು ಹೇಳಿದರು.
ಶರಣಬಸವ ವಿಶ್ವವಿದ್ಯಾಲಯದ ಸಹ ಕುಲಪತಿ ಡಾ| ವಿ.ಡಿ. ಮೈತ್ರಿ, ಕುಲಸಚಿವ ಡಾ| ಅನಿಲಕುಮಾರ ಬಿಡವೆ, ಡೀನ್ ಡಾ| ಲಿಂಗರಾಜ ಶಾಸ್ತ್ರೀ, ಡಾ| ಲಕ್ಷ್ಮೀ ಮಾಕಾ, ಡಾ| ಜವಳಗಿ, ಡಾ| ಎಂ.ಎಸ್.ಪಾಟಿಲ, ಟಿ.ವಿ. ಶಿವಾನಂದನ್ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.
ಅಂತರ ವಿಶ್ವವಿದ್ಯಾಲಯ ವಾರ್ಷಿಕ ಕ್ರೀಡಾಕೂಟ: ಅಂತರ್ ವಿಶ್ವವಿದ್ಯಾಲಯ ಮಟ್ಟದಲ್ಲಿ ಹಮ್ಮಿಕೊಂಡಿದ್ದ ಕ್ರೀಡಾಕೂಟದಲ್ಲಿ ಶರಣಬಸವ ವಿಶ್ವವಿದ್ಯಾಲಯ ಹೆಚ್ಚಿನ ಪ್ರಶಸ್ತಿಗಳನ್ನು ತನ್ನ ಮೂಡಿಗೇರಿಸಿಕೊಂಡು ವಿನ್ನರ್ ಅಪ್ ಟ್ರೋಫಿ ಪಡೆದುಕೊಂಡಿದೆ. ಗುಲ್ಬರ್ಗ ವಿಶ್ವವಿದ್ಯಾಲಯ ರನ್ನರರಪ್ ಟ್ರೋಫಿ ತನ್ನದಾಗಿಸಿಕೊಂಡಿದೆ. ಗುಲ್ಬರ್ಗ ವಿಶ್ವವಿದ್ಯಾಲಯ, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಶ್ವಶೇರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ಶರಣಬಸವ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.