Advertisement

ಉದ್ಯೋಗದಲ್ಲಿ ಕನ್ನಡಿಗರಿಗೆ ಪ್ರಾಶಸ್ತ್ಯ ನೀಡಿ

12:29 PM Nov 25, 2021 | Team Udayavani |

ಚಿಕ್ಕಬಳ್ಳಾಪುರ: ಉದ್ಯೋಗದಲ್ಲಿ ಕನ್ನಡಿಗರಿಗೆ ಪ್ರಾಶಸ್ತ್ಯ ದೊರೆಯಬೇಕೆಂದು ಕೆಪಿಸಿಸಿ ಸದಸ್ಯ ವಿನಯ್‌ ಎನ್‌.ಶ್ಯಾಮ್‌ ಹೇಳಿದರು. ನಗರದ ಬಜಾರ್‌ ರಸ್ತೆಯಲ್ಲಿ ಕರವೇ ಯುವಸೇನೆಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇತರೆ ಭಾಷಿಕರು ಕನ್ನಡ ಕಲಿತು ವ್ಯವಹರಿಸಬೇಕು. ಜೊತೆಗೆ ಆಡಳಿತ ವ್ಯವಸ್ಥೆಯಲ್ಲೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸ ಬೇಕೆಂದು ಆಗ್ರಹಿಸಿದರು.

Advertisement

ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ಕನ್ನಡಿ ಗರಿಗೆ ಉದ್ಯೋಗ ನೀಡುವ ವಿಚಾರದಲ್ಲಿ ಪ್ರಥಮ ಪ್ರಾಶಸ್ತ್ಯ ನೀಡಬೇಕು, ಅನ್ಯಭಾಷೆ ಗರೊಂದಿಗೆ ಉತ್ತಮ ಸಂಪರ್ಕವನ್ನು ಸಾಧಿಸಿ ಕನ್ನಡ ಭಾಷೆಯನ್ನು ಎಲ್ಲೆಡೆ ಪಸರಿಸಲು, ಕನ್ನಡ ಸೇವೆ ಮಾಡುತ್ತಿರುವ ಕಲಾವಿದರಿಗೆ ವಿಶೇಷ ಸ್ಥಾನಮಾನ ನೀಡಬೇಕೆಂದು ಮನವಿ ಮಾಡಿದರು.

ಚಿಕ್ಕಬಳ್ಳಾಪುರ ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ಕನ್ನಡಪರ ವಾತಾವರಣವನ್ನು ನಿರ್ಮಿಸಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಘೋಷಿಸಿದರು. ಕನ್ನಡ ಚಿತ್ರರಂಗದಲ್ಲಿ ನಟನೆ, ಸಮಾಜಸೇವೆ ಮೂಲಕ ಇಡೀ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದ ನಟ ಪುನೀತ್‌ ರಾಜಕುಮಾರ್‌ ಅವರ ಆದರ್ಶವನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಂಡು ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ:- ಆರ್ ಸಿಬಿ, ಸಿಎಸ್ ಕೆ ರಿಟೆನ್ಶನ್ ಆಟಗಾರರ ಪಟ್ಟಿ ಸಿದ್ದ: ಪಾಂಡ್ಯ ಬ್ರದರ್ಸ್ ಕೈಬಿಟ್ಟ ಮುಂಬೈ

ನಗರದ ಜಿಲ್ಲಾಸ್ಪತ್ರೆಗೆ ಸಂಪರ್ಕ ಕಲ್ಪಿಸುವ ವೃತ್ತಕ್ಕೆ ನಟ ಪುನೀತ್‌ರಾಜಕುಮಾರ್‌ ಅವರ ಹೆಸರಿಡಬೇಕೆಂದು ಆಗ್ರಹಿಸಿದರು. ಈ ವೇಳೆಯಲ್ಲಿ ನಟ ಪುನೀತ್‌ ರಾಜಕುಮಾರ್‌ ಅವರ ಭಾವಚಿತ್ರಕ್ಕೆ ಪುಷ್ಪವನ್ನು ಸಮರ್ಪಿಸಿ ಗೌರವ ನಮನ ಸಲ್ಲಿಸಲಾಯಿತು. ತಮಟೆ ಕಲಾವಿದರು ಜನಾಕರ್ಷಕ ನೃತ್ಯ ರೂಪಕದ ಮೂಲಕ ಗಮನ ಸೆಳೆದರು.

Advertisement

ಕರವೇ ಯುವಸೇನೆಯ ಜಿಲ್ಲಾ ಕಾರ್ಯಾಧ್ಯಕ್ಷ ಬಾಲು, ಜಿಲ್ಲಾಧ್ಯಕ್ಷ ಶಿವರಾಮೇಗೌಡ, ತಾಲೂಕು ಅಧ್ಯಕ್ಷ ಶ್ರೀನಿವಾಸ್‌, ಜಿಲ್ಲಾ ಗೌರವಾಧ್ಯಕ್ಷ ತಿಪ್ಪೇನಹಳ್ಳಿ ನಾರಾಯಣಸ್ವಾಮಿ, ನಗರಸಭಾ ಸದಸ್ಯ ನರಸಿಂಹಮೂರ್ತಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಕೆ.ಎಂ.ಮುನೇಗೌಡ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next