Advertisement
ಪಟ್ಟಣದ ಗಿರಿಯಮ್ಮ ವೃತ್ತದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಘಟಕದ ನೂತನ ಜಿಲ್ಲಾಧ್ಯಕ್ಷ ಎಂ.ಮುಖೇಶ್ ಬಾಬು ಹಾಗೂ ಜಿಲ್ಲಾ, ತಾಲೂಕು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದಾ ^ಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ವಿದ್ಯಾರ್ಥಿ ಘಟಕಕ್ಕೆ ಹೆಚ್ಚಿನ ಇತಿಹಾಸವಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಬದಲಿಗೆ ಶೇ. 40% ಕಮಿಷನ್ ಸರ್ಕಾರ ಎಂಬ ಹೆಸರಿಗೆ ಪಾತ್ರವಾಗಿದೆ ಎಂದರು.
Related Articles
Advertisement
ನಾಯಕರ ಹಿಂದೆ ಹೋಗಬೇಡಿ: ಮಾಜಿ ಸಂಸದ ಧ್ರುವನಾರಾಯಣ್ ಮಾತನಾಡಿ, ಯಾವುದೇ ನಾಯಕರ ಹಿಂದೆ ಹೋಗಬೇಡಿ. ಅವರ ಮನೆಗಳ ಹತ್ತಿರ ತಿರುಗಾಡಬೇಡಿ. ಅದರ ಬದಲಾಗಿ ವಿದ್ಯಾರ್ಥಿ ಗಳ ಸಮಸ್ಯೆ ಅರಿತು ಬಗೆಹರಿಸಿದಾಗ ಮತ್ತಷ್ಟು ಪಕ್ಷ ಬಲವರ್ಧನೆಯಾಗುತ್ತದೆ ಎಂದರು.
ವಿಧಾನಪರಿಷತ್ ಸದಸ್ಯ ಎಸ್.ರವಿ, ಮಾಜಿ ಶಾಸಕ ಮುನಿನರ ಸಿಂಹಯ್ಯ, ರಾಷ್ಟ್ರೀಯ ಯುವಕಾಂಗ್ರೆಸ್ ಅಧ್ಯಕ್ಷ ಪಿ. ವಿ.ಶ್ರೀನಿವಾಸ್, ರಾಜ್ಯ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಕೀರ್ತಿಗಣೇಶ್, ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಸಿ.ಜಗನ್ನಾಥ್, ಕಾರ್ಯದರ್ಶಿ ಎಸ್. ಆರ್.ರವಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಎಂ. ಮುಖೇಶ್ ಬಾಬು, ಜಿಪಂ ಮಾಜಿ ಸದಸ್ಯ ಕೆ.ಸಿ. ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ಉಪಾಧ್ಯಕ್ಷ ದ್ಯಾವರಹಳ್ಳಿ ಶಾಂತಕುಮಾರ್, ಪ್ರಧಾನ ಕಾರ್ಯದರ್ಶಿ ಎಸ್.ಪಿ.ಮುನಿರಾಜು, ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ನಾಗೇಶ್, ಮಾರುತಿ, ರೇಖಾ ವೇಣುಗೋಪಾಲ್, ನಾಗೇಗೌಡ, ಅಕ್ಕಯ್ಯಮ್ಮ, ಮುಖಂಡ ನಟರಾಜ್, ಮಾರುತಿ, ಅರ್ಜುನ್, ಸುನೀಲ್ ಕುಬೇರ್, ಕೇಶವ ರಾಜಣ್ಣ ಹಾಗೂ ಮತ್ತಿತರರು ಇದ್ದರು.
ರಾಜ್ಯದ ಭ್ರಷ್ಟ ಬಿಜೆಪಿಸರ್ಕಾರ ಕೊನೆಗಾಣಿಸಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ಭ್ರಷ್ಟ ಬಿಜೆಪಿ ಸರ್ಕಾರವನ್ನು ಕೊನೆಗಾಣಿಸಬೇಕು. ವಿದ್ಯಾರ್ಥಿಗಳು ಮನಸು ಮಾಡಿದರೆ, ಯಾವುದೇ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ತಿಳಿಸಿ ಕೊಡಬೇಕು. ಪ್ರತಿ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಕಾಂಗ್ರೆಸ್ ವಿದ್ಯಾರ್ಥಿ ಘಟಕವನ್ನು ಸಂಘಟಿಸಬೇಕು. ವಿದ್ಯಾರ್ಥಿಗಳ ಸಮಸ್ಯೆ ಅರಿತು ಕೆಲಸ ಮಾಡಿದಾಗ ಮತ್ತಷ್ಟು ವಿದ್ಯಾರ್ಥಿ ಘಟಕ ಬಲಿಷ್ಠವಾಗುತ್ತದೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು.