Advertisement

ಜನರಿಗೆ ಬಿಜೆಪಿ ವೈಫ‌ಲ್ಯ ಮನದಟ್ಟು ಮಾಡಿ

05:56 PM Jun 10, 2022 | Team Udayavani |

ದೇವನಹಳ್ಳಿ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತವನ್ನು ಕೊನೆಗಾಣಿಸಿ 2023ರಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ರಾಜ್ಯದಲ್ಲಿ ತರಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ತಿಳಿಸಿದರು.

Advertisement

ತಾಲೂಕಿನ ಸಾದಹಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ದೇವನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ನೂತನ ಪ್ರಧಾನ ಕಾರ್ಯದರ್ಶಿ ಎಸ್‌.ನಾಗೇಗೌಡ ಅವರಿಗೆ ಆದೇಶಪತ್ರ ವಿತರಿಸಿ ಮಾತನಾಡಿದ ಅವರು, ಪ್ರತಿ ಬೂತ್‌ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರಬೇಕು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಇದ್ದಾಗ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪ್ರತಿ ಮನೆಮನೆಗೆ ತಿಳಿಸಬೇಕು ಎಂದು ಹೇಳಿದರು.

ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸಿ: ಬಿಜೆಪಿ ಸರ್ಕಾರ ಶೇ.40 ಸರ್ಕಾರ ಆಗಿದೆ. ಕೇಂದ್ರ, ರಾಜ್ಯ ಸರ್ಕಾರದ ವೈಫ‌ಲ್ಯಗಳನ್ನು ಜನರಿಗೆ ಮನದಟ್ಟು ಮಾಡಬೇಕು. ನೂತನ ಪ್ರಧಾನ ಕಾರ್ಯದರ್ಶಿ ಎಸ್‌ .ನಾಗೇಗೌಡ ಅವರು ಪಕ್ಷವನ್ನು ಸಂಘಟಿಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಾಸಕರನ್ನು ಗೆಲ್ಲಿಸುವುದು ಹಾಗೂ ತಾಲೂಕಿನಲ್ಲಿ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಹೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಹೇಳಿದರು.

ಯಾವುದೇ ಉದ್ಯೋಗ ಸೃಷ್ಟಿ ಮಾಡಿಲ್ಲ: ಯುವ ಕರಿಗೆ ಯಾವುದೇ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಸದೆ, ನಿರುದ್ಯೋಗ ಸಮಸ್ಯೆ ದೇಶದ ಯುವಕರು ಎದುರಿಸು ತ್ತಿದ್ದಾರೆ. ಬೋಂಡ, ಪಕೋಡ ಮಾರಿ ಎಂದು ಪ್ರಧಾನಿಗಳು ಹೇಳುತ್ತಾರೆ. ಒಂದು ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿ  ದವರು. ಎಂಟು ವರ್ಷಗಳಲ್ಲಿ 16 ಕೋಟಿ ಉದ್ಯೋಗ ಸೃಷ್ಟಿಸಬೇಕಾಗಿತ್ತು. ಆದರೆ, ಈವರೆಗೆ ಯಾವುದೇ ಉದ್ಯೋಗ ಸೃಷ್ಟಿ ಮಾಡಿಲ್ಲ. ಬದಲಾಗಿ ಇವರ
ಆಡಳಿತಾವಧಿಯಲ್ಲಿ ಯುವಕರು ತಮ್ಮ ಉದ್ಯೋಗ ಕಳೆದುಕೊಂಡು ಪರಿತಪಿಸುತ್ತಿದ್ದಾರೆ ಎಂದ ಅವರು, ಪ್ರಧಾನಿ ನರೇಂದ್ರಮೋದಿ ಅಧಿಕಾರಕ್ಕೆ ಬಂದ ನಂತರ ಸ್ವರ್ಗ ತೋರಿಸುತ್ತೇನೆ ಎಂದು ಹೇಳಿ ಎಂಟು ವರ್ಷದಲ್ಲಿ ನರಕ ತೋರಿಸಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಪಕ್ಷ ಸಂಘಟನೆ: ನೂತನ ದೇವನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಎಸ್‌ .ನಾಗೇಗೌಡ ಮಾತನಾಡಿ, ತಾಲೂಕಿನಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟನೆ ಮಾಡಲಾಗುವುದು. ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲಾಗುವುದು. ಕಳೆದ ಹತ್ತು ವರ್ಷಗಳಿಂದ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರು ಇಲ್ಲದಿರುವುದರಿಂದ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಈ ಬಾರಿ ದೇವನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರನ್ನು ಗೆಲ್ಲಿಸಲು ಶ್ರಮವಹಿಸಲಾಗುವುದು ಎಂದು ಹೇಳಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್‌, ಸದಸ್ಯ ಚೇತನ್‌ಗೌಡ, ದೇವನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಾಮನಾಥಪುರ ಸಿ.ಪ್ರಸನ್ನಕುಮಾರ್‌, ಉಪಾಧ್ಯಕ್ಷ ದ್ಯಾವರಹಳ್ಳಿ ವಿ. ಶಾಂತಕುಮಾರ್‌ ಹಾಗೂ ಮತ್ತಿತರರು ಇದ್ದರು.

Advertisement

ಅಭಿವೃದ್ಧಿ ಕಾರ್ಯಗಳಲ್ಲಿ ಬಿಜೆಪಿ ಹಿನ್ನಡೆ: ಎಂಎಲ್‌ಸಿ ರವಿ ಕೋವಿಡ್‌ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ. ಕೋವಿಡ್‌
ಸಮಯದಲ್ಲಿ ಬಿಜೆಪಿ ಸರ್ಕಾರ ಹೆಣದ ಮೇಲೆ ಹಣ ಮಾಡಿದ ಸರ್ಕಾರ ವಾಗಿದೆ. ಬಿಜೆಪಿ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರಲ್ಲಿ ಹಿಂದುಳಿದಿದೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾರಿಗೆ ಪಕ್ಷದ ವರಿಷ್ಠರು ಟಿಕೆಟ್‌ ನೀಡುತ್ತಾರೋ ಅವರನ್ನು ಒಗ್ಗಟ್ಟಿನಿಂದ ಗೆಲ್ಲಿಸಿಕೊಂಡು ಬರಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next