Advertisement
ತಾಲೂಕಿನ ನುಣ್ಣೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಕೊರತೆಯಿಂದ ಕರ್ನಾಟಕದ ವಿವಿಧೆಡೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿವೆ. ಹಳ್ಳಿಗಾಡಿನಲ್ಲಿಯೂ ಖಾಸಗಿ ಶಾಲೆಗಳ ಭರಾಟೆ ಹೆಚ್ಚಾಗುತ್ತಿದೆ. ಕೆಲವು ಪೋಷಕರು ಉಳ್ಳವರನ್ನು ಅನುಕರಣೆ ಮಾಡಲೋ, ಪ್ರತಿಷ್ಟೆಗಾಗಿಯೋ ಅಥವಾ ಖಾಸಗಿ ಶಾಲೆಗಳ ಅಬ್ಬರದ ಪ್ರಚಾರಕ್ಕೆ ಮರುಳಾಗಿಯೋ ತಮ್ಮ ಮಕ್ಕಳನ್ನು ಸಾಲ ಮಾಡಿ ಖಾಸಗಿ ಶಾಲೆಗಳಿಗೆ ದಾಖಲಿಸುತ್ತಾರೆ. ಆನಂತರ ತಮ್ಮ ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ಭರಿಸಲು ಇನ್ನಿಲ್ಲದ ಪರದಾಟ ಮಾಡುವುದನ್ನು ಕಾಣುತ್ತಿದ್ದೇವೆ. ಯಾವ ಖಾಸಗಿ ಶಾಲೆಗಳಿಗಿಂತಲೂ ಸರ್ಕಾರಿ ಶಾಲೆಗಳು ಕಡಿಮೆಯಲ್ಲ. ವಿದ್ಯಾರ್ಥಿಗಳ ಅಭಿವೃದ್ಧಿಗೆ ಬೇಕಾದ ಎಲ್ಲಾ ಅನುಕೂಲಗಳು ಇಂದು ಸರ್ಕಾರಿ ಶಾಲೆಗಳಲ್ಲಿ ಇವೆ ಎಂಬುದನ್ನು ಪೋಷಕರು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಕಿವಿಮಾತು ಹೇಳಿದರು.
Related Articles
Advertisement
ಈ ವೇಳೆ ಎಂಪಿಸಿಎಸ್ ಅಧ್ಯಕ್ಷ ಚಂದ್ರು, ಕಾರ್ಯದರ್ಶಿ ನಾಗರಾಜು, ಎಸ್‌ಡಿಎಂಸಿ ಅಧ್ಯಕ್ಷ ನಿಂಗಾಚಾರಿ ಹಾಗೂ ಸದಸ್ಯರು, ಕ್ಷೇತ್ರ ಸಮನ್ವಯಾಧಿಕಾರಿ ಕುಸುಮ ಲತಾ, ಸಿಆರ್‌ಪಿ ಕೆ.ವೆಂಕಟೇಶ್, ಮುಖ್ಯ ಶಿಕ್ಷಕಿ ಪಾರ್ವತಮ್ಮ, ಸಹ ಶಿಕ್ಷಕಿ ಲಕ್ಷೀದೇವಮ್ಮ, ಗ್ರಾಪಂ ಸದಸ್ಯ ಎನ್.ಆರ್. ರವಿ, ಮಾಜಿ ಸದಸ್ಯ ಎನ್.ಎಲ್.ಶಿವಕುಮಾರ್, ಮುಖಂಡ ಪೊಲೀಸ್ ಕೃಷ್ಣೇಗೌಡ, ಹಾರೋಕೊಪ್ಪ ಕ್ಲಸ್ಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.