Advertisement

ಯೋಜನೆ ಮಾಹಿತಿ ಜನತೆಗೆ ತಿಳಿಸಿ

12:51 PM Jun 23, 2022 | Team Udayavani |

ಸೇಡಂ: ಬಿಜೆಪಿ ಜಗತ್ತಿನ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನರಪವಾದ ಯೋಜನೆಗಳನ್ನು ಜನರ ತಿಳಿಸುವ ಕೆಲಸವನ್ನು ಪ್ರತಿಯೊಬ್ಬ ಕಾರ್ಯಕರ್ತನು ಮಾಡಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರೂ ಆದ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದರು.

Advertisement

ಪಟ್ಟಣದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಬುಧುವಾರ ತಾಲೂಕು ಬಿಜೆಪಿ ಆಯೋಜಿಸಿದ್ದMake project information public ಕಾರ್ಯಕಾರಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಕಟ್ಟ ಕಡೆ ವ್ಯಕ್ತಿಗೂ ಸಿಗಬೇಕಾದಂತಹ ಯೋಜನೆಗಳನ್ನು ದೇಶದ ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದಿದ್ದಾರೆ ಎಂದರು.

ಹಿಂದೆ ಯಾವುದಾದರೂ ಸರ್ಕಾರದ ಯೋಜನೆ ಬಂದರೆ ಅದು ಕೆಲವರಿಗೆ ಮಾತ್ರ ಸೀಮಿತವಾಗಿರುತ್ತಿತ್ತು, ಸಮಯ ಬದಲಾಗಿದೆ, ನೇರವಾಗಿ ಫಲಾನುಭವಿಗಳಿಗೆ ಯೋಜನೆ ಲಾಭ ತಲುಪುತ್ತಿದೆ. ಈ ಕುರಿತು ಪ್ರತಿ ಮನೆ-ಮನೆಗೆ ಹೋಗಿ ತಿಳಿಹೇಳುವ ಕೆಲಸ ಮಾಡಬೇಕು ಎಂದು ಹೇಳಿದರು. ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್‌ ಠಾಕೂರ, ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ, ತಾಲೂಕು ಅಧ್ಯಕ್ಷ ಪರ್ವತರೆಡ್ಡಿ ಪಾಟೀಲ ನಾಮವಾರ ಮಾತನಾಡಿದರು. ವಿ

ಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ ಬಿನ್ನಾಡೆ ಸಂಘಟನಾ ಸಭೆ ನಡೆಸಿದರು. ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ಚಿಮ್ಮನಚೋಡಕರ್‌, ಡಿಸಿಸಿ ಬ್ಯಾಂಕ್‌ ನಿರ್ದೆಶಕ ಕಲ್ಯಾಣಪ್ಪ ಪಾಟೀಲ, ಪಕ್ಷದ ಜಿಲ್ಲಾ ಕಾರ್ಯದರ್ಶಿ ಅತೀಶ ಪವಾರ, ಪುರಸಭೆ ಅಧ್ಯಕ್ಷೆ ಶೋಭಾ ಹೂಗಾರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಾಗರೆಡ್ಡಿ ದೇಶಮುಖ ಮದನಾ, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಯಕ್ಮಾಯಿ, ಯುವ ಮೋರ್ಚಾ ಅಧ್ಯಕ್ಷ ಪ್ರಶಾಂತ ಕೇರಿ, ಹಿಂದುಳಿದ ಮೋರ್ಚಾ ಅಧ್ಯಕ್ಷ ವೆಂಕಟಯ್ಯ ಮುಸ್ತಾಜರ, ರೈತ ಮೋರ್ಚಾ ಅಧ್ಯಕ್ಷ ವೀರಾರೆಡ್ಡಿ ಬಟಗೇರಾ ಇನ್ನಿತರರಿದ್ದರು. ಶರಣು ಕೆರಳ್ಳಿ ಪ್ರಾರ್ಥಿಸಿದರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಪ್ಪ ಕೊಳ್ಳಿ ಸ್ವಾಗತಿಸಿದರು, ತಾಲೂಕು ಪ್ರಧಾನ ಕಾರ್ಯದರ್ಶಿ ಓಂಪ್ರಕಾಶ ಪಾಟೀಲ ನಿರೂಪಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next