Advertisement

ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಲಿ

03:29 PM Sep 04, 2022 | Team Udayavani |

ಗದಗ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಹಂಚಿಕೆ ಯೋಜನೆಗೆ ಸಂಬಂಧಿಸಿದಂತೆ ಅರ್ಹ ಫಲಾನುಭವಿಗಳ ಆಯ್ಕೆ ಮಾಡುವಾಗ ಪಾರದರ್ಶಕತೆ ಇರಲಿ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್‌ಸಿ, ಎಸ್‌ಟಿ ಉಪಹಂಚಿಕೆ ಯೋಜನೆಗೆ ಸಂಬಂಧಿಸಿದಂತೆ ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ವಿಳಂಬವಾಗದೇ ಶೀಘ್ರಗತಿಯಲ್ಲಿ ತಲುಪುವಂತಾಗಬೇಕು. ಯೋಜನೆಯ ಅನುಷ್ಠಾನದಲ್ಲಿ ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧನೆ ಅತಿ ಮುಖ್ಯವಾಗಿದ್ದು, ಈ ಯೋಜನೆಯಡಿ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳು ನಿಗದಿತ ಕಾಲಮಿತಿಯಲ್ಲಿಯೇ ಪೂರ್ಣಗೊಳ್ಳುವಂತೆ ಅಧಿಕಾರಿಗಳು ಕ್ರಮ ವಹಿಸಬೇಕೆಂದರು.

ಸದರಿ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಇಲಾಖಾವಾರು ಸಾಧಿಸಿದ ಪ್ರಗತಿಯ ವಿವರವನ್ನು ಇಲಾಖೆ ಅಂತರ್ಜಾಲದಲ್ಲಿ ತಪ್ಪದೇ ದಾಖಲಿಸುವುದು ಕೂಡ ತುಂಬಾ ಮುಖ್ಯವಾಗಿದೆ ಎಂದರು.

ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದ ಡಿಸಿ, ಈ ಯೋಜನೆಯಡಿ ಬಿಡುಗಡೆಯಾಗುವ ಅನುದಾನ ನಿಗದಿತ ಕಾಲಮಿತಿಯೊಳಗೆ ಸಮರ್ಪಕವಾಗಿ ಬಳಕೆಯಾಗದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisement

ಜಿಪಂ ಸಿಇಒ ಡಾ|ಸುಶೀಲಾ ಬಿ. ಮಾತನಾಡಿ, ಎಸ್‌ಸಿ, ಎಸ್‌ಟಿ ಪ್ರದೇಶಗಳಲ್ಲಿ ಕೈಗೊಂಡ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ದೊರಕಬೇಕೆಂದು ಸೂಚಿಸಿದರು.

ಸಕಾಲ: ಸಕಾಲ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆ ಉತ್ತಮ ಪ್ರಗತಿ ಸಾಧಿಸಲು ಎಲ್ಲ ಅಧಿಕಾರಿಗಳು ಸ್ವೀಕರಿಸಿದ ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಕಾಲದಲ್ಲಿ ಅರ್ಜಿ ಸ್ವೀಕರಿಸುವಾಗ ಅರ್ಜಿಯ ಜೊತೆಗೆ ನಿಗದಿಪಡಿಸಿದ ದಾಖಲಾತಿಗಳ ಸಮೇತ ಸ್ವೀಕರಿಸಬೇಕು. ಅನಗತ್ಯ ವಿಳಂಬ ಮಾಡದೇ ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಸಕಾಲದಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ನಿಗದಿಪಡಿಸಿದ ವೇಳೆಯಲ್ಲಿ ವಿಲೇವಾರಿ ಮಾಡದಿದ್ದಲ್ಲಿ ಇಲಾಖೆಯ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಹಾಗೂ ಶಿಸ್ತು ಕ್ರಮಕ್ಕೆ ಒಳಗಾಗಬೇಕಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವಲಿಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ ನುಚ್ಚಿನ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಬಿರಾದಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮೆಹಬೂಬ ತುಂಬರಗಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ., ತಹಶೀಲ್ದಾರ್‌ರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next