Advertisement
ಭಾನುವಾರ ಜಿಲ್ಲಾಡಳಿತದ ತುಂಗಭದ್ರಾ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಷ್ಟೋ ಬಾರಿ ಉತ್ಸಾಹದಿಂದ ಮತ ಚಲಾಯಿಸಲು ಮತಗಟ್ಟೆಗೆ ಹೋದಾಗ ಮತದಾರರ ಪಟ್ಟಿಯಲ್ಲಿ ಹೆಸರೇ ಮಾಯವಾಗಿರುತ್ತದೆ. ಆಗ ನಿರಾಶೆಯಿಂದ ಮನೆಗೆ ವಾಪಸ್ ಆಗಬೇಕಾಗುತ್ತದೆ. ಅದನ್ನು ತಪ್ಪಿಸುವ ಮತ್ತು ಮತ ಚಲಾವಣೆ ಮಾಡಲು ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂಬುದನ್ನ ಖಾತರಿ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
Related Articles
Advertisement
ಪ್ರಾಸ್ತಾವಿಕ ಮಾತುಗಳಾಡಿದ ಉಪವಿಭಾಗಾಧಿಕಾರಿ ಬಿ.ಟಿ ಕುಮಾರಸ್ವಾಮಿ, ವಿಶ್ವದ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತದಲ್ಲಿ ಚುನಾವಣೆ ಎಂಬುದು ಒಂದು ಹಬ್ಬವಿದ್ದಂತೆ. ಸುಭದ್ರ ಸರ್ಕಾರಕ್ಕಾಗಿ ತಮ್ಮ ಹಕ್ಕನ್ನು ಚಲಾಯಿಸುವ ಒಂದು ಸಂಭ್ರಮದ ಹಬ್ಬವಾಗಿದೆ ಎಂದರು.
ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮ ಒಂದು ರೀತಿ ಚುನಾವಣಾ ಆಯೋಗವೇ ಮತದಾರರ ಬಳಿ ಹೋಗುವ ಪ್ರಕ್ರಿಯೆ. ಮತದಾರರ ಮನೆ ಮನೆಗಳಿಗೆ ತೆರಳಿ ಅಧಿಕಾರಿಗಳು ಹೊಸ ಮತದಾರರ ಹೆಸರುಗಳ ಸೇರ್ಪಡೆ, ಪತಿ, ಪತ್ನಿ ಹೆಸರುಗಳು ಬೇರೆ ಬೇರೆ ಕಡೆಗಳಲ್ಲಿ ಇರುವುದು, ವಾಸಸ್ಥಳ ಬದಲಾವಣೆ, ವಲಸೆ ಪ್ರಕರಣಗಳು, ಮರಣಹೊಂದಿದವರ ಹೆಸರುಗಳು ಮತದಾರರ ಪಟ್ಟಿಯಲ್ಲಿರುವುದನ್ನು ತೆಗೆದು ಹಾಕುವುದು ಮುಂತಾದ ಕಾರ್ಯಗಳನ್ನು ಮಾಡಲಿದ್ದಾರೆ ಎಂದು ತಿಳಿಸಿದರು.
ಬಿಎಲ್ಓಗಳು ಬಂದಾಗ ಅವರಿಗೆ ಸರಿಯಾದ ಮಾಹಿತಿ ನೀಡಿ ಸಾರ್ವಜನಿಕರು ಸಹಕಾರ ನೀಡಬೇಕು. ಒಂದು ವೇಳೆ ಅರ್ಹ ಮತದಾರರಲ್ಲದವರ ಹೆಸರುಗಳು ಪಟ್ಟಿಯಲ್ಲಿದ್ದರೆ ಅವರಿಗೆ ನೋಟಿಸ್ ನೀಡಲಾಗುವುದು. ಈಗಾಗಲೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ನ್ಯೂನ್ಯತೆಗಳಿದ್ದರೆ ಸರಿಪಡಿಸಿಕೊಳ್ಳಬಹುದು. ಮತದಾರರ ನೋಂದಣಿ ಕಚೇರಿಯಲ್ಲಿರುವ ಹೆಲ್ಪ್ಡೆಸ್ಕ್ಗಳಲ್ಲಿ ಮಾಹಿತಿ ಪಡೆದುಕೊಂಡು ಮತದಾರರ ಪಟ್ಟಿಯಲ್ಲಿರುವ ತಮ್ಮ ಮಾಹಿತಿ ಸರಿಯಾಗಿ ಇದೆಯೇ ಎಂದು ಪರಿಶೀಲಿಸಿಕೊಳ್ಳಬಹುದು ಎಂದು ತಿಳಿಸಿದರು.
ಹರಿಹರ -ಕೊಟ್ಟೂರು ರೈಲ್ವೆ ಭೂಸ್ವಾಧೀನಾಧಿಕಾರಿ ರೇಷ್ಮಾ ಹಾನಗಲ್, ಪಾಲಿಕೆ ಉಪ ಆಯಕ್ತ ರವೀಂದ್ರ ಬಿ. ಮಲ್ಲಾಪುರ, ಜಗಳೂರು ತಹಶೀಲ್ದಾರ್ ತಿಮ್ಮಣ್ಣ, ಪಾಲಿಕೆ ಸಹಾಯಕ ಮತದಾನ ಅಧಿಕಾರಿ ನಾಗರಾಜ್, ಗದುಗೇಶ್, ಚುನಾವಣಾ ತಹಶೀಲ್ದಾರ್ ಪ್ರಸಾದ್, ಶ್ರೀಕುಮಾರ್, ಲಕ್ಷ್ಮಿಕಾಂತ್ ಜಿಲ್ಲಾ ಹಾಗೂ ತಾಲೂಕು ಅಧಿಕಾರಿಗಳು ಇದ್ದರು.