Advertisement
ನಗರದ ಜೆಡಿಎಸ್ ಕಾರ್ಯಾಲಯದಲ್ಲಿ ಜಿಲ್ಲಾ ಪದಾಧಿ ಕಾರಿಗಳ ಆಯ್ಕೆ ಸಭೆಯಲ್ಲಿ ಮಾತ ನಾಡಿ, ಕಾಂಗ್ರೆಸ್, ಬಿಜೆಪಿ ಜನರ ವಿಶ್ವಾಸ ಕಳೆದು ಕೊಂಡಿವೆ. ರಾಜ್ಯದ ಅಭಿವೃದ್ಧಿಗಾಗಿ ಪ್ರಾದೇಶಿಕ ಪಕ್ಷಗಳನ್ನು ಬಲಿಷ್ಠಗೊಳಿಸುವುದು ಅನಿವಾರ್ಯ ವಾಗಿದೆ. ಮುಂದಿನ ವಿಧಾನಸಭೆ ಚುನಾವಣೆ ಯಲ್ಲಿ ಜೆಡಿಎಸ್ ಅಧಿ ಕಾರಕ್ಕೆ ತರುವ ಸಲುವಾಗಿ ನಿರಂತರವಾಗಿ ಪಕ್ಷದ ಮುಖಂಡರು, ಕಾರ್ಯ ಕರ್ತರ ಸಭೆ ನಡೆಸಲಾ ಗುತ್ತಿದೆ. 2023ಕ್ಕೆ ಕುಮಾರಸ್ವಾಮಿ ಅವರನ್ನು ಸಿಎಂ ಮಾಡುವುದೇ ನಮ್ಮ ಮುಖ್ಯ ಗುರಿ ಎಂದು ಪುನರುಚ್ಚಿಸಿದರು.
Related Articles
Advertisement
ಸದಸ್ಯತ್ವ ಮಾಡಿ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ನಾಗರಾಜ್‌ರೆಡ್ಡಿ ಮಾತನಾಡಿ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ 25 ಸಾವಿರ ಜನರಿಗೆ ಸದಸ್ಯತ್ವ ನೀಡುವ ಮೂಲಕ ಪಕ್ಷ ಸಂಘಟನೆ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ನಗರಸಭೆ ಉಪಾಧ್ಯಕ್ಷೆ ವೀಣಾರಾಮು, ಯುವ ಘಟಕದ ಅಧ್ಯಕ್ಷರಾಗಿ ರಘುನಾಥ್‌ರೆಡ್ಡಿ ಅವರನ್ನು ನೇಮಕ ಮಾಡಿ ಆದೇಶ ಪತ್ರ ವಿತರಿಸಲಾಯಿತು. ಸಭೆಯಲ್ಲಿ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯ ದರ್ಶಿ ಬಾಲಕುಂಟಹಳ್ಳಿ ಮುನಿಯಪ್ಪ, ಚಿಕ್ಕ ಬಳ್ಳಾಪುರ ನಗರಸಭೆ ಉಪಾಧ್ಯಕ್ಷೆ ವೀಣಾ ರಾಮು, ಸದಸ್ಯ ಮಟ್ಟಮ್ಮಪ್ಪ, ಚಿಕ್ಕಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಮುನಿರಾಜು, ಉಪಾಧ್ಯಕ್ಷ ಬನ್ನಿಕುಪ್ಪೆ ವೆಂಕಟೇಶ್, ಮಹಿಳಾ ಘಟಕದ ಅಧ್ಯಕ್ಷೆ ಅಣ್ಯಮ್ಮ, ಬಾಗೇಪಲ್ಲಿ ತಾಲೂಕು ಜೆಡಿಎಸ್ ಕಾರ್ಯಾಧ್ಯಕ್ಷ ನೂರುಲ್ಲಾ ಉಪಸ್ಥಿತರಿದ್ದರು.
ಬಾಗೇಪಲ್ಲಿ ಕ್ಷೇತ್ರದ ಜೆಡಿಎಸ್‌ಅಭ್ಯರ್ಥಿ ನಾನೇಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರು ನನಗೆ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ, ಶತಾಯಗತಾಯವಾಗಿ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇನೆ, ಯಾರು ಏನು ಬೇಕಾದರೂ ಹೇಳಿಕೊಳ್ಳಲಿ, ಅದರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಪರೋಕ್ಷವಾಗಿ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿರುವ ವಿಧಾನಪರಿಷತ್ ಸದಸ್ಯ ರಮೇಶ್ ಗೌಡ ವಿರುದ್ಧ ಮುಖಂಡ ಡಿ.ಜೆ.ನಾಗರಾಜರೆಡ್ಡಿ ಅಸಮಾಧಾನ ಹೊರಹಾಕಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪದಾಧಿ ಕಾರಿಗಳ ಪಟ್ಟಿ ಸೆ.30ರೊಳಗೆ ಸಲ್ಲಿಸದಿದ್ದರೇ, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಕುಮಾರಸ್ವಾಮಿಯವರಿಗೆ ತಿಳಿಸಿ ದ್ದೇನೆ. ಹೀಗಾಗಿ ಅಲ್ಲಿಯವರೆಗೂ ಸಹಕರಿಸಬೇಕು.
-ಕೆ.ಎಂ.ಮುನೇಗೌಡ,
ಜೆಡಿಎಸ್ ಜಿಲ್ಲಾಧ್ಯಕ್ಷ