ಕಚೇರಿ ಹಾಗೂ ಇತರೆ ಕಚೇರಿಗಳನ್ನು ಲಂಚಮುಕ್ತಗೊಳಿಸಬೇಕೆಂದು ಒತ್ತಾಯಿಸಿ ಜನಾಧಿಕಾರ ಸಂಘಟನೆ ಮುಖಂಡರು ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದರು.
Advertisement
ಈ ವೇಳೆ ಮಾತನಾಡಿದ ಮುಖಂಡರು, ಈಗಾಗಲೇ ಸಂಘಟನೆಯಿಂದ ಈ ವಿಷಯದ ಬಗ್ಗೆ ಪ್ರತಿಭಟನೆ ನಡೆಸಿದ್ದು, ತಮ್ಮ ಗಮನಕ್ಕೂ ತಂದಿದ್ದೇವೆ. ಆದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಯಾವುದೇ ಸರ್ಕಾರದ ಆದೇಶವಿಲ್ಲದೆ ಮತ್ತು ಚುನಾವಣಾ ನೀತಿ ಸಂಹಿತೆ ಜಾರಿಯಾಗದೆ ಕಚೇರಿ ಮುಂಭಾಗದಲ್ಲಿ ನಾಮಫಲಕ ಹಾಕಿದ್ದಾರೆ. ಈ ಮೂಲಕ ಇಲ್ಲಿನ ತಾಲೂಕು ಅಧಿಕಾರಿಗಳು ಪ್ರತಿಭಟನೆ ಮತ್ತು ಸಾರ್ವಜನಿಕರ ಹಕ್ಕುಗಳನ್ನು ಮೊಟುಕುಗೊಳಿಸಲು ಯತ್ನಿಸುತ್ತಿದ್ದಾರೆಂದು ಆರೋಪಿಸಿದರು.
ಕೆಲವರಿಗೆ ಚೀಟಿ ವಿತರಿಸಿ, ಒಂದು ವಾರದೊಳಗೆ ಉಳಿದ ಫಲಾನುಭವಿಗಳಿಗೆ ವಿತರಿಸುವುದಾಗಿ ಘೋಷಣೆ
ಮಾಡಿದ್ದಾರೆ. ಆದರೆ, ಇದುವರೆಗೂ ಸಾಗುವಳಿ ಚೀಟಿಗಳನ್ನು ನೀಡಿಲ್ಲ. ಈ ಬಗ್ಗೆ ತಾವು ಗಮನ ಹರಿಸಿ ಕಚೇರಿಗೆ ಗ್ರಾಮಿಣ ಪ್ರದೇಶದಿಂದ ರೈತರು ಅಲೆದಾಡುವುದನ್ನು ತಪ್ಪಿಸಬೇಕೆಂದು ಒತ್ತಾಯಿಸಿದರು. ತಾಲೂಕು ಕಚೇರಿಯ ಕೆಲವು ಅಧಿಕಾರಿಗಳು ಸುಮಾರು ವರ್ಷಗಳಿಂದ ಇದೇ ಕಚೇರಿಯಲ್ಲಿ ಠಿಕಾಣಿ ಹೂಡಿದ್ದಾರೆ. ಸಾರ್ವಜನಿಕರಿಗೆ ಯಾವುದೇ ಕೆಲಸ ಕಾರ್ಯಗಳನ್ನು ಮಾಡಿಕೊಡದೆ, ಕನಿಷ್ಠ ಗೌರವವನ್ನೂ ಕೊಡುತ್ತಿಲ್ಲ. ಮೂರು ವರ್ಷಕ್ಕೂ ಹೆಚ್ಚು ಕಾಲ ಒಂದೇ ಸ್ಥಳದಲ್ಲಿ ಬೇರುಬಿಟ್ಟಿರುವ ಅಧಿಕಾರಿಗಳನ್ನು ಬೇರೆಡೆಗೆ ವರ್ಗಾವಣೆ ಮಾಡಿ, ಸಾರ್ವಜನಿಕರಿಗೆ ಅನಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದರು. ಜನಸಾಮಾನ್ಯರಿಗೆ ಹಾಗೂ ಪ್ರಗತಿಪರ ಸಂಘಟನೆಗಳಿಗೆ ಶಾಂತಿಯುತ ಪ್ರತಿಭಟನೆ ನಡೆಸಲು ಕಚೇರಿ ಮುಂಭಾಗದಲ್ಲಿ ಅವಕಾಶ ಮಾಡಿಕೊಡಬೇಕು. ಲಂಚಮುಕ್ತ ತಾಲೂಕು ಕಚೇರಿ ಎಂದು ಪ್ರತಿ ಇಲಾಖೆ ಮುಖ್ಯಸ್ಥರ ಕೊಠಡಿ ಮುಂದೆ ಫಲಕ ಹಾಕಬೇಕೆಂದು ಒತ್ತಾಯಿಸಿದರು. ನಿಯೋಗದಲ್ಲಿ ಜನಾಧಿಕಾರ ಸಂಘಟನೆ ಜಿಲ್ಲಾಧ್ಯಕ್ಷ
ಕೆ.ರಾಮಮೂರ್ತಿ, ತಾಲೂಕು ಅಧ್ಯಕ್ಷ ಎಸ್.ಕೆ.ಜಗದೀಶ್, ಗ.ರಾಮಕ್ಕ, ನಾರಾಯಣಮ್ಮ, ಕವಿತಾ ಮುಂತಾದವರು
ಉಪಸ್ಥಿತರಿದ್ದರು.