Advertisement

ಹರ್‌ ಘರ್‌ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ

06:05 PM Aug 06, 2022 | Team Udayavani |

ನವಲಗುಂದ: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಹರ್‌ ಘರ್‌ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿ ಸಬೇಕೆಂದು ಪುರಸಭೆ ಅಧ್ಯಕ್ಷ ಅಪ್ಪಣ್ಣ ಹಳ್ಳದ ಹೇಳಿದರು.

Advertisement

ಶುಕ್ರವಾರ ಪುರಸಭೆ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಭಿಯಾನ ಯಶಸ್ಸಿಗೆ ಪ್ರತಿ ವಾರ್ಡ್‌ ಸದಸ್ಯರು, ಪುರಸಭೆ ಸಿಬ್ಬಂದಿ ಕೈಜೋಡಿಸಬೇಕೆಂದರು. ತಹಶೀಲ್ದಾರ ಅನೀಲ ಬಡಿಗೇರ ಮಾತನಾಡಿ, ತಾಲೂಕಿನಲ್ಲಿ ಮನೆ ಮನೆಯ ಮೇಲೆಯೂ ರಾಷ್ಟ್ರಧ್ವಜವನ್ನು ಹಾರಿಸಬೇಕು. ಅದಕ್ಕಾಗಿ ಸಾರ್ವಜನಿಕರ ಜಾಗೃತಿಗಾಗಿ ಆ. 10 ರಂದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಮತ್ತು ಪ್ರಭಾತಪೇರಿಯನ್ನು ಮ್ಮಿಕೊಳ್ಳಲಾಗಿದೆ.

ಇದರ ಜೊತೆಗೆ ಮಾರುಕಟ್ಟೆಯಲ್ಲಿ ರಾಷ್ಟ್ರಭಕ್ತಿ ಗೀತೆಗಳ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಪ್ರತಿಯೊಬ್ಬರು ಹರ್‌ ಘರ್‌ ತಿರಂಗಾ ಅಭಿಯಾನವನ್ನು ಅಳವಡಿಸಿ ಕೊಳ್ಳಬೇಕೆಂದು ಹೇಳಿದರು. ಮುಖ್ಯಾಧಿಕಾರಿ ವೀರೇಶ ಹಸಬಿ ಮಾತನಾಡಿ, ಆ.10 ರಂದು ಹಮ್ಮಿಕೊಂಡ ಹರ್‌ ಘರ್‌ ತಿರಂಗಾ ಅಭಿಯಾನ ಜಾಗೃತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಹೇಳಿದರು.

ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ ಮೇಟಿ, ಪುರಸಭೆ ಸದಸ್ಯರಾದ ಪ್ರಕಾಶ ಶಿಗ್ಲಿ, ಮಂಜುನಾಥ ಜಾಧವ, ಮಹಾಂತೇಶ ಕಲಾಲ, ಹನಮಂತ ವಾಲೀಕರ, ಮಹಾಂತೇಶ ಭೋವಿ, ಮೋದಿನಸಾಬ ಶಿರೂರ, ಜೀವನ ಪವಾರ, ರೈತ ಮುಖಂಡ ಲೋಕನಾಥ ಹೆಬಸೂರ ಇನ್ನಿತರರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next