Advertisement
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಹರ ಘರ್ ತಿರಂಗಾ ಅಭಿಯಾನದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಧ್ವಜದ ಕಾರ್ಯಕ್ರಮದಡಿ ಮನೆ ಮನೆಯಲ್ಲೂ 20×30 ಅಳತೆಯ ರಾಷ್ಟ್ರಧ್ವಜ ಹಾರಿಸಬೇಕಾಗಿದೆ. ಕಾಟನ್, ಪಾಲಿಸ್ಟರ್‌ನಿಂದ ತಯಾರಿಸಿದ ರಾಷ್ಟ್ರಧ್ವಜ ಹಾರಿಸಲು ಅನುಮತಿ ನೀಡಲಾಗಿದೆ. ಮೂರು ದಿನಗಳ ಕಾಲ ಸರ್ಕಾರಿ ಕಚೇರಿಗಳು, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು, ನಿಗಮ-ಮಂಡಳಿ ಕಚೇರಿಗಳು, ಶಾಲಾ-ಕಾಲೇಜು, ಅರೆ ಸರ್ಕಾರಿ ಸಂಸ್ಥೆಗಳಲ್ಲೂ ಕಡ್ಡಾಯವಾಗಿ ರಾಷ್ಟ್ರಧ್ವಜ ಹಾರಿಸಬೇಕು. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ರಾಷ್ಟ್ರಧ್ವಜ ಖರೀದಿಸಿ ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಮನವಿ ಮಾಡಿಕೊಂಡಿದ್ದಾರೆ.
Related Articles
Advertisement
ವಿದ್ಯಾರ್ಥಿಗಳಿಂದ ವಂದೇ ಮಾತರಂ, ರಘುಪತಿ ರಾಘವ ರಾಜಾರಾಂ ಮತ್ತು ಇನ್ನಿತರೆ ದೇಶಭಕ್ತಿ ಗೀತೆಗಳನ್ನು ಹಾಡಿಸಬೇಕು. ಸಾರ್ವಜನಿಕರಿಗೆ ಸ್ವಾತಂತ್ರ್ಯ ಹೋರಾಟದ ತ್ಯಾಗ-ಬಲಿದಾನದ ಕುರಿತು ಅರಿವು ಮೂಡಿಸಬೇಕೆಂದು ಸೂಚನೆ ನೀಡಿದರು. ಸರ್ಕಾರಿ ಕಚೇರಿ ಕಟ್ಟಡಗಳು, ಸರ್ಕಾರೇತರ ಸಂಘ- ಸಂಸ್ಥೆಗಳ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಕ್ರಮ ವಹಿಸಬೇಕು. ಸಾಮಾಜಿಕ ಜಾಲತಾಣಗಳು ಒಳಗೊಂಡಂತೆ ವಿವಿಧ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ರಸ್ತೆ ಸಾರಿಗೆ ಹಾಗೂ ವಾಹನಗಳ ಮೇಲೆ ಅಭಿಯಾನದ ಕುರಿತು ಪ್ರದರ್ಶನ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಡಿಎಫ್‌ಒ ಬಾಲಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ಎನ್ .ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.