Advertisement

ನರೇಗಾ ಯೋಜನೆ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ

05:40 PM Apr 13, 2022 | Team Udayavani |

ಮಂಡ್ಯ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಎನ್‌ಆರ್‌ಎಲ್‌ಎಂ ಸ್ವಹಾಯ ಸಂಘದ ಮಹಿಳೆಯರು ಮಾಹಿತಿ ಪಡೆದು ಯೋಜನೆಯಲ್ಲಿ ಸಿಗುವ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಪಂ ಯೋಜನಾ ನಿರ್ದೇಶಕ ಧನರಾಜು ತಿಳಿಸಿದರು.

Advertisement

ನಗರದ ಜಿಪಂ ಸಭಾಂಗಣದಲ್ಲಿ ತಾಪಂ ವತಿಯಿಂದ ನಡೆದ ಎನ್‌ಆರ್‌ಎಲ್‌ಎಂ ಸಂಜೀವಿನಿ ಗ್ರಾಪಂ ಮಟ್ಟದ ಅಧ್ಯಕ್ಷರು ಹಾಗೂ ಸ್ವಸಹಾಯ ಸಂಘದ ಸದಸ್ಯರು ಮುಖ್ಯ ಪುಸ್ತಕ ಬರಹಗಾರರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪಾಲ್ಗೊಳ್ಳಿ: ಸಂಜೀವಿನಿ ಒಕ್ಕೂಟ ಹಾಗೂ ನರೇಗಾ ಯೋಜನೆ ಎರಡಕ್ಕೂ ಸಂಬಂಧವಿದೆ. ಈ ಎರಡು ಯೋಜನೆಯಡಿ ಮಹಿಳೆಯರು ಉತ್ತಮ ರೀತಿ ಯಲ್ಲಿ ಪಾಲ್ಗೊಳ್ಳಲು ಮುಂದಾಗಬೇಕು ಎಂದರು. ಜಿಪಂ ಸಹಾಯಕ ಯೋಜನಾ ಧಿಕಾರಿ ಷಣ್ಮುಗಂ ಮಾತನಾಡಿ, ನರೇಗಾ ಯೋಜನೆಯಡಿ ಮಹಿಳೆಯ ರಿಗೆ ಸಾಕಷ್ಟು ಅನುಕೂಲಗಳಿದ್ದು, ಪ್ರತಿಯೊಬ್ಬರು ಯೋಜನೆಯಲ್ಲಿ ಪಾಲ್ಗೊಳ್ಳಬೇಕು. ಮಹಿಳೆಯರು ಸರ್ಕಾರಿ ಯೋಜನೆಗಳಲ್ಲಿ ಭಾಗವಹಿಸಿ, ಆರ್ಥಿಕ ವಾಗಿ ಮುಂದುವರಿಯಬೇಕು ಎಂದು ತಿಳಿಸಿದರು.

ಕೆಲಸ ಪಡೆದುಕೊಳ್ಳಿ: ಸಹಾಯಕ ನಿರ್ದೇಶಕ(ಗ್ರಾ.ಉ) ಎಚ್‌.ಆರ್‌.ಶ್ರೀನಿವಾಸ್‌ ಮಾತನಾಡಿ, ನರೇಗಾ ಯೋಜನೆಯಡಿ 309 ರೂ. ಕೂಲಿ ಹೆಚ್ಚಳದ ಬಗ್ಗೆ ತಿಳಿಸಿದ ಅವರು, ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.

ನಂತರ ತರಬೇತಿ ಪಡೆದ ತಮ್ಮೆಲ್ಲರಿಂದ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಯಕ ಸಂಘ ರಚನೆ ಮಾಡಿಕೊಂಡು 100 ದಿನ ಕೆಲಸ ಪಡೆದುಕೊಳ್ಳುವಂತಾಗಬೇಕು ಎಂದು ತಿಳಿಸಿದರು.

Advertisement

ಇಲಾಖೆ ಯೋಜನೆ ಬಗ್ಗೆ ಮಾಹಿತಿ: ತರಬೇತಿ ಕಾರ್ಯಾಗಾರದಲ್ಲಿ 46 ಗ್ರಾಪಂಗಳಿಂದ ಸುಮಾರು 375 ಜನ ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು. ಇವರಿಗೆ ನರೇಗಾ ಯೋಜನೆ ಅನುಷ್ಠಾನ ಇಲಾಖೆ ಗಳಾದ ಕೃಷಿ, ತೋಟಗಾರಿಕೆ, ಅರಣ್ಯ ಹಾಗೂ ರೇಷ್ಮೆ ಇಲಾಖೆ ವತಿಯಿಂದ ಯೋಜನೆಯಡಿ ಸಿಗುವ ಸೌಲಭ್ಯಗಳ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಸಂಜೀವಿನಿ ಒಕ್ಕೂಟದ ವತಿಯಿಂದ ಕೃಷಿ ಜೀವನೋಪಾಯ ಚಟುವಟಿಕೆ ಕೈಗೊಳ್ಳುವ ಬಗ್ಗೆ, ಸ್ವತ್ಛ ಭಾರತ್‌ ಮಿಷನ್‌ ವತಿಯಿಂದ ಘನ ತ್ಯಾಜ್ಯ ನಿರ್ವಹಣೆ ಮಾಡುವ ಬಗ್ಗೆ ಮಹಿಳೆಯರಿಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ನರೇಗಾ ಯೋಜನೆ ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು, ನರೇಗಾ ಸಿಬ್ಬಂದಿ, ಎನ್‌ಆರ್‌ಎಲ್‌ಎಂ ಸಂಯೋಜಕರು, ಮಹಿಳಾ ಸ್ವಸಹಾಯ ಸಂಘದ ಮಹಿಳೆಯರು ಜಿಪಂ, ತಾಪಂ ಸಿಬ್ಬಂದಿ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next