Advertisement

ಜನರಲ್ಲಿ ಯೋಗ ಅರಿವು ಮೂಡಿಸಿ

05:23 PM Jun 08, 2018 | |

ಶಿವಮೊಗ್ಗ: ಯೋಗ ದಿನಾಚರಣೆ ಸಂದರ್ಭದಲ್ಲಿ ಯುವ ಜನರು ಯೋಗದ ಬಗ್ಗೆ ಹೆಚ್ಚಿನ ಒಲವು ಮೂಡಿಸುವಂತಹ
ಕಾರ್ಯಕ್ರಮ ರೂಪಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಕೇಶ್‌ ಕುಮಾರ್‌ ತಿಳಿಸಿದರು.

Advertisement

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಯೋಜನೆ ಕುರಿತು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ
ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಈ ಬಾರಿ ಜೂ. 21ರಂದು ನಗರದ ನೆಹರು
ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಮಾತ್ರವಲ್ಲದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ಅಂದು ಬೆಳಗ್ಗೆ 7ರಿಂದ ಕಾರ್ಯಕ್ರಮ ಆರಂಭವಾಗಲಿದ್ದು, ಆರಂಭದಲ್ಲಿ ಸಾಮೂಹಿಕ ಯೋಗ ಪ್ರದರ್ಶನ, ನಂತರ
ವೇದಿಕೆ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9ಗಂಟೆಗೆ ಯೋಗ ನಡಿಗೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು
ತಿಳಿಸಿದರು.

ಯೋಗ ನಡಿಗೆ ನೆಹರು ಒಳಾಂಗಣ ಕ್ರೀಡಾಂಗಣದಿಂದ ಪ್ರಾರಂಭವಾಗಿ ಜಿಲ್ಲಾಧಿಕಾರಿ ಕಚೇರಿ, ಕೋರ್ಟ್‌ ಸರ್ಕಲ್‌,
ಸರ್ಕಾರಿ ನೌಕರರ ಭವನ ಮೂಲಕ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಸೇರಲಿದೆ. ಈ ಸಂದರ್ಭದಲ್ಲಿ ಯೋಗದ ಬಗ್ಗೆ ಜನಸಾಮಾನ್ಯರಲ್ಲಿ ಆಸಕ್ತಿ ಮೂಡುವಂತಹ ಕಾರ್ಯಕ್ರಮ ರೂಪಿಸಬೇಕು ಎಂದು ಹೇಳಿದರು. ವೇದಿಕೆ ಕಾರ್ಯಕ್ರಮದ ಸಂದರ್ಭದಲ್ಲಿ ಒತ್ತಡ ನಿವಾರಣ ತಂತ್ರ, ಆರೋಗ್ಯದ ಬಗ್ಗೆ ವಿಶೇಷ ಉಪನ್ಯಾಸ ಆಯೋಜಿಸಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಆಯುರ್ವೇದ ಮಹಾವಿದ್ಯಾಲಯ, ವಿವಿಧ ಸಂಘ ಸಂಸ್ಥೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಹಕಾರದಿಂದ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಸೂಚನೆ ನೀಡಿದರು. 

ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಜಿಲ್ಲಾ ಆಯುಷ್‌ ಅಧಿಕಾರಿ ಡಾ| ಹರ್ಷ ಪುತ್ತುರಾಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಘದ ಪ್ರತಿನಿಧಿಗಳು ಸಭೆಯಲ್ಲಿ ಇದ್ದರು

Advertisement
Advertisement

Udayavani is now on Telegram. Click here to join our channel and stay updated with the latest news.

Next