ಕಾರ್ಕಳ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾಮ್ ಅವರಿಂದ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗುರುಕುಲ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ’ ಕಾರ್ಯಕ್ರಮ ಶನಿವಾರ ನಡೆಯಿತು.
ಮಾಳ ಗ್ರಾ.ಪಂ. ಅಧ್ಯಕ್ಷೆ ರಕ್ಷಿತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸಿಇಒ ಪ್ರಸನ್ನ ಎಚ್., ಕುಂದಾಪುರ ವಿಭಾಗ ಸಹಾಯಕ ಆಯುಕ್ತೆ ರಶ್ಮಿ, ಕುದುರೆಮುಖ ವಿಭಾಗ ಎ.ಸಿ.ಎಫ್. ಲೇಖರಾಜ್ ಮೀನಾ, ಆರೋಗ್ಯ ಇಲಾಖೆ ಅಧಿಕಾರಿ ಡಾ| ಚಂದ್ರಕಾಂತ್ ಸೂಡ ಉಪಸ್ಥಿತರಿದ್ದರು. ತಹಶೀಲ್ದಾರ್ ಅನಂತ ಶಂಕರ್ ಸ್ವಾಗತಿಸಿದರು.
ಈ ಸಂದರ್ಭದಲ್ಲಿ “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ಯ ನೆನಪಿಗಾಗಿ ಶಾಲಾ ವಠಾರದಲ್ಲಿ ಗಿಡ ನೆಟ್ಟರು. ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಸಚಿವ ವಿ. ಸುನಿಲ್‌ಕುಮಾರ್ ಗ್ರಾಮವಾಸ್ತವ್ಯ ಸ್ಥಳಕ್ಕೆ ಭೇಟಿ ನೀಡಿದರು.
ಗ್ರಾಮ ವಾಸ್ತವ್ಯದಲ್ಲಿ ಬಹುತೇಕ ರಸ್ತೆ, ರಸ್ತೆ ಬದಿಯ ಅಪಾಯಕಾರಿ ಮರ ತೆರವು ಇತ್ಯಾದಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಅಹವಾಲುಗಳು ಹೆಚ್ಚು ಕೇಳಿ ಬಂದವು. ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಪೇರಡ್ಕ ಎಸ್‌ಟಿ ಕಾಲನಿ, ಕೂಡುಬೆಟ್ಟು ಪ್ರೌಡ ಶಾಲೆಗೆ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು. ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ 77 ಅರ್ಜಿಗಳು ಸ್ವೀಕಾರಗೊಂಡವು.
ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಯಿತು. ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ರಾತ್ರಿ ವಾಸ್ತವ್ಯ ರದ್ದುಪಡಿಸಲಾಗಿತ್ತು.