Advertisement

ಮಾಳ ಚೆಕ್ ಪೋಸ್ಟ್ ಬಳಿ ಬೈಕ್, ಟ್ಯಾಂಕರ್ ನಡುವೆ ಅಪಘಾತ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

05:44 PM Feb 02, 2023 | Team Udayavani |

ಕಾರ್ಕಳ : ಬಜಗೋಳಿ- ಮಾಳ ಹೆದ್ದಾರಿಯ ಮಾಳ ಚೆಕ್ ಪೋಸ್ಟ್ ಬಳಿ ಟ್ಯಾಂಕರ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ವಿದ್ಯಾರ್ಥಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಫೆ. 2ರಂದು ಸಂಭವಿಸಿದೆ.

Advertisement

ಸಹ ಸವಾರೆ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಬ್ಬರೂ ಕರಾವಳಿ ಆಯುರ್ವೇದ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಮೃತ ಯುವಕನ ಮಾಹಿತಿ ಲಭ್ಯವಾಗಿಲ್ಲ.

ಹೊರನಾಡು ದೇವಸ್ಥಾನಕ್ಕೆ ಹೋಗಿ ಬರುವ ವೇಳೆ ಅಪಘಾತ ಸಂಭವಿಸಿದೆ. ಮೃತಪಟ್ಟ ವಿದ್ಯಾರ್ಥಿ ಮಹಾರಾಷ್ಟ್ರ ಹಾಗೂ ವಿದ್ಯಾರ್ಥಿನಿ ಕೋಲಾರ ಮೂಲದವರಾಗಿದ್ದಾರೆ.

ವಿದ್ಯಾರ್ಥಿನಿ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ಸಾರೆ.

Advertisement

ಇದನ್ನೂ ಓದಿ: ಶೂಗಳನ್ನು ತೋರಿಸಿ ತೆಲಂಗಾಣ ಸಿಎಂ ಕೆಸಿಆರ್ ಗೆ ಸವಾಲು ಹಾಕಿದ ವೈಎಸ್ ಶರ್ಮಿಳಾ ; ವಿಡಿಯೋ

Advertisement

Udayavani is now on Telegram. Click here to join our channel and stay updated with the latest news.

Next