Advertisement
ಉಪನಗರದಲ್ಲಿ ಅತೀ ಹೆಚ್ಚು ಕನ್ನಡ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿರುವ ಈ ಸಂಸ್ಥೆಯ ಸಾಂಸ್ಕೃತಿಕ, ಸಾಮಾಜಿಕ ವೈಭವವನ್ನು ಮರು ಸ್ಥಾಪಿಸಿ ಪರಿಸರದ ಕನ್ನಡಿಗರಿಗೆ ಮತ್ತೊಮ್ಮೆ ವೈವಿಧ್ಯ ಕಾರ್ಯಕ್ರಮಗಳನ್ನು ನೀಡುವ ಸಂಸ್ಥೆಯನ್ನಾಗಿ ಬೆಳೆಸಬೇಕು ಎಂದು ಮಲಾಡ್ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನ್ಯಾಯವಾದಿ ಜಗದೀಶ್ ಹೆಗ್ಡೆ ತಿಳಿಸಿದರು.
Related Articles
Advertisement
ಗೌರವ ಕಾರ್ಯದರ್ಶಿ ಶಂಕರ್ ಡಿ. ಪೂಜಾರಿ ಮಾತನಾಡಿ, ಸುಮಾರು ಇಪ್ಪತ್ತು ವರ್ಷಗಳ ಹಿಂದೆ ಮಾಲ್ವಾಣಿ ಪರಿಸರದಲ್ಲಿ ಬೆಳೆದ ಈ ಸಂಸ್ಥೆಗೆಕೋವಿಡ್ ಮಹಾಮಾರಿಯಿಂದ ಸ್ಥಗಿತಗೊಂಡಿದ್ದ ಕಾರ್ಯಕ್ರಮಗಳಿಗೆ ಮತ್ತೆ ಕಾಯಕಲ್ಪ ದೊರೆಯ ಬೇಕಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲ ಒಗ್ಗಟ್ಟಾಗಿ ಮತ್ತೆ ಕಾರ್ಯೋನ್ಮುಖರಾಗಬೇಕು. ಮಲಾಡ್ ಪರಿಸರದಲ್ಲಿ ವೈವಿಧ್ಯ ಕಾರ್ಯಕ್ರಮಗಳನ್ನು ನೀಡುತ್ತಾ ಹೆಸರು ವಾಸಿ ಯಾದ ಸಂಸ್ಥೆಗೆ ನಾವೆಲ್ಲ ಹಿಂದಿನಂತೆ ನಿಸ್ವಾರ್ಥ ಸೇವೆಯಿಂದ ಸೇವೆ ಸಲ್ಲಿಸಬೇಕಾಗಿದೆ. ಪರಿಸರದಲ್ಲಿ ಮಲಾಡ್ ಕನ್ನಡ ಸಂಘದ ಹೆಸರನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಸಾಂಘಿಕ ಚಿಂತನೆ ನಮ್ಮಲ್ಲಿ ಬೆಳೆಯಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಹಿರಿಯ ಸದಸ್ಯರಾದ ಬಾಬು ಶೆಟ್ಟಿ, ಸಾಧು ಡಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಂತೋಷ್ ಪೂಜಾರಿ, ಮಾಜಿ ಯುವ ವಿಭಾಗದ ಕಾರ್ಯಾಧ್ಯಕ್ಷ ಸೂರಪ್ಪ ಕುಂದರ್ ಅವರು ಸಂಘದ ಮುಂದಿನ ಕಾರ್ಯಯೋಜನೆಯ ಬಗ್ಗೆ ಸಲಹೆ-ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಮಾಸಿಕ ಲೆಕ್ಕಪತ್ರ, ವರದಿ ಮಂಡಿಸಲಾಯಿತು. ಸಂಘದ ಮುಖಾಂತರ ಶೀಘ್ರದಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ
ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು. ಗೌರವ ಕೋಶಾಧಿಕಾರಿ ಪ್ರಕಾಶ್ ಎಸ್. ಶೆಟ್ಟಿ, ಜತೆ ಕಾರ್ಯದರ್ಶಿ ಅನಿಲ್ ಎಸ್ ಪೂಜಾರಿ, ಜತೆ ಕೋಶಾಧಿಕಾರಿ ಶಂಕರ್ ಆರ್. ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಕಾರ್ಯದರ್ಶಿ ಶಾಂಭವಿ ಬಿ. ಶೆಟ್ಟಿ, ಯುವ ವಿಭಾಗದ ಕಾರ್ಯದರ್ಶಿ ಸುಂದರ ಪೂಜಾರಿ, ಉಪಸಮಿತಿಯ ಸದಸ್ಯರು ಸಲಹೆ-ಸೂಚನೆಗಳನ್ನು ನೀಡಿದರು.