Advertisement

ಮಳಲಿ ಮಸೀದಿ ವಿವಾದ: ವಿಚಾರಣೆ ಮತ್ತೆ ಮುಂಡೂಡಿಕೆ

06:07 PM Jun 10, 2022 | Team Udayavani |

ಮಂಗಳೂರು: ಮಳಲಿ ಮಸೀದಿ ನವೀಕರಣ ಸಂದರ್ಭ ದೇವಾಲಯ ಮಾದರಿಯ ರಚನೆಗಳು ಪತ್ತೆಯಾದ ಹಿನ್ನೆಲೆಯಲ್ಲಿ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದ ವಿಚಾರಣೆಯನ್ನು ಮತ್ತೆ ನ್ಯಾಯಾಲಯವು ಜೂ. 14ಕ್ಕೆ ಮುಂದೂಡಿದೆ.

Advertisement

ಶುಕ್ರವಾರ ಮಳಲಿ‌ ಮಸೀದಿ ಪರ ವಕೀಲ ಎಂ.ಪಿ.ಶೆಣೈ ವಾದ ಮಂಡನೆ ಮಾಡಿದ್ದು, ಮಳಲಿಯಲ್ಲಿರುವುದು ಮಸೀದಿ ಎಂದು ಮತ್ತೆ ಸಾಬೀತು ಪಡಿಸುವ ಅಗತ್ಯ ಇಲ್ಲ. ಸರಕಾರಿ ವಕ್ಫ್(ಕಾನೂನಿನ ಪ್ರಕಾರ ಪ್ರಾರ್ಥನಾ ಸ್ಥಳ) ದಾಖಲೆ ಪ್ರಕಾರ ಅಲ್ಲಿ ಮಸೀದಿ ಇರುವುದು ದಾಖಲಾಗಿದೆ. ಅಂಥಹ ಸ್ಥಳವನ್ನು ನಿಯಮಗಳ ಪ್ರಕಾರ ವಕ್ಫ್ ಆಸ್ತಿಯೆಂದು ಕರೆಯುತ್ತಾರೆ ಎಂದು ವಾದಿಸಿದರು.

ಇದನ್ನೂ ಓದಿ:ಮಂಗಳೂರು: ಸಾವರ್ಕರ್‌ ಫೋಟೋ ವಿಚಾರದಲ್ಲಿ ವಿದ್ಯಾರ್ಥಿಗಳ  ಗುಂಪು ಘರ್ಷಣೆ

ಒಂದು ಜಾಗವನ್ನು ಪುರಾತನ ಸ್ಮಾರಕ ಎಂದು  ಹೇಳಲು ಕೇಂದ್ರ ಸರಕಾರದಿಂದ ನೋಟಿಫಿಕೇಶನ್ ಆಗಬೇಕು. ಆದರೆ ಮಳಲಿ ಮಸೀದಿ ಮೇಲೆ ಯಾವುದೇ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಹೀಗಿರುವಾಗ ಇದನ್ನು ಪುರಾತನ ಸ್ಮಾರಕವೆಂದು ಹೇಳಲು ಸಾಧ್ಯವಿಲ್ಲ. ಅಲ್ಲದೇ ಇದನ್ನು ಸ್ಮಾರಕವೋ ಅಲ್ಲವೋ ಎಂದು ಹೇಳಲು ಸಿವಿಲ್ ಕೋರ್ಟ್ ಗೆ ಅಧಿಕಾರ ಇಲ್ಲ. ಹೀಗಾಗಿ ಈ ಅರ್ಜಿಯನ್ನು ವಜಾಗೊಳಿಸುವಂತೆ ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next