Advertisement

ಉಡುಪಿ ಜಿಲ್ಲೆ: ಜೂನ್‌ನಲ್ಲಿ 48 ಮಲೇರಿಯಾ, 84 ಡೆಂಗ್ಯೂಪ್ರಕರಣ

03:40 AM Jul 07, 2017 | Karthik A |

ಉಡುಪಿ: ಜೂನ್‌ ತಿಂಗಳಲ್ಲಿ ಜಿಲ್ಲೆಯಲ್ಲಿ 48 ಮಲೇರಿಯಾ, 84 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಸಾಂಕ್ರಾಮಿಕ ರೋಗ ತಡೆಗೆ ಪ್ರಕರಣ ಹೆಚ್ಚಿರುವ ಪ್ರದೇಶಗಳಲ್ಲಿ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಿಸಲಾಗಿದೆ. ಸೊಳ್ಳೆ ಪರದೆಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರೋಹಿಣಿ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಅಪರ ಜಿಲ್ಲಾಧಿಕಾರಿ ಅನುರಾಧಾ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಮಲೇರಿಯಾ ಸಮನ್ವಯ ಸಮಿತಿ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಮಲೇರಿಯಾ ಟ್ರ್ಯಾಕಿಂಗ್‌ ಬಗ್ಗೆ ಆರೋಗ್ಯ ಕಾರ್ಯಕರ್ತರಿಗೆ ಸೂಕ್ತ ತರಬೇತಿ ನೀಡಲಾಗಿದೆ ಎಂದರು.

Advertisement

ಜುಲೈಯಿಂದ ಆಗಸ್ಟ್‌ವರೆಗೆ ಡೆಂಗ್ಯೂ ಮಾಸಾಚರಣೆ ಮಾಡಲು ಸೂಚನೆ ನೀಡಲಾಗಿದೆ. ನಿಟ್ಟೂರು, ಹನುಮಂತನಗರ ಮುಂತಾದೆಡೆ ಒಟ್ಟು 54 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ ಎಂದು ಮಲೇರಿಯಾಧಿಕಾರಿ ಡಾ| ಪ್ರೇಮಾನಂದ ಮಾಹಿತಿ ನೀಡಿದರು. ಈಗಾಗಲೇ ಜಿಲ್ಲೆಯಲ್ಲಿ ಮಲೇರಿಯಾ ಜಾಗೃತಿ ಸಂಬಂಧ ಆರೋಗ್ಯ ಇಲಾಖೆ ಸ್ಥಳೀಯಾಡಳಿತ ಸಮನ್ವಯದೊಂದಿಗೆ ಹಲವು ಕಾರ್ಯ ಕ್ರಮಗಳನ್ನು ಕೈಗೊಂಡಿದ್ದು, ಈ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಎಂದು ಅಪರ ಜಿಲ್ಲಾಧಿಕಾರಿ ಅನುರಾಧಾ ಅವರು ಹೇಳಿದರು.

ಶಾಲೆಗಳಲ್ಲಿ, ಸ್ಥಳೀಯಾಡಳಿತ ಪ್ರದೇಶಗಳಲ್ಲಿ ಐಇಸಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳು ಮಲೇರಿಯಾ ಚಿಕಿತ್ಸೆ ನೀಡುವ ವೇಳೆ ಸರಕಾರದ ನೀತಿಯನ್ನು ಅನುಸರಿಸಬೇಕು. ವಲಸೆ ಕಾರ್ಮಿಕರು ಸ್ಪ್ರೇ ಸುರಕ್ಷಾ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು. ಫೋನ್‌ ಇನ್‌ ಕಾರ್ಯಕ್ರಮ, ಸಮುದಾಯ ಮಾಹಿತಿ, ಮಾಧ್ಯಮಗಳ ಮೂಲಕ ಮಾಹಿತಿ ನೀಡುವಂತೆಯೂ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next