Advertisement

ಮಲೇರಿಯಾ ವಿರೋಧಿ ಮಾಸಾಚರಣೆ: ‘ಪರಿಸರ ಸ್ವಚ್ಛತೆಯಿಂದ ಸ್ವಸ್ಥ ಆರೋಗ್ಯ’

02:05 AM Jul 18, 2017 | Karthik A |

ಹೆಬ್ರಿ: ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಡುವುರ ಮೂಲಕ ನಮ್ಮ ಆರೋಗ್ಯವನ್ನು ಉತ್ತಮವಾಗಿಡಲು ಸಾಧ್ಯ. ಪ್ರತಿಯೊಬ್ಬರು ಪರಿಸರ ಸ್ವಚ್ಛತೆ ಬಗ್ಗೆ ನಿಗಾ ವಹಿಸಿ, ಮಲೇರಿಯಾದಿಂದ ಪಾರಾಗಿ ಎಂದು ಜಿ.ಪಂ. ಸದಸ್ಯೆ ಜ್ಯೋತಿ ಹರೀಶ್‌ ಹೇಳಿದರು. ಅವರು ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ, ಜಿಲ್ಲಾ ಆರೋಗ್ಯ ಕು.ಕ. ಇಲಾಖೆ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಹೆಬ್ರಿ, ರಾಷ್ಟ್ರೀಯ ಸೇವಾ ಯೋಜನೆ, ಸ.ಪ್ರ.ದ ಕಾಲೇಜು, ಸ.ಪ.ಪೂ. ಕಾಲೇಜು ಹೆಬ್ರಿ, ಲಯನ್ಸ್‌ ಕ್ಲಬ್‌ ಹೆಬ್ರಿ ಸಿಟಿ, ಗ್ರಾ.ಪಂ. ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ರಿ ಸ.ಪ.ಪೂ. ಕಾಲೇಜಿನಲ್ಲಿ ಜು. 17ರಂದು ನಡೆದ ಮಲೇರಿಯಾ ವಿರೋಧಿ ಮಾಸಾಚರಣೆ ಮತ್ತು ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೆಬ್ರಿ ಗ್ರಾ.ಪಂ. ಅಧ್ಯಕ್ಷ ಸುಧಾಕರ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ| ಪ್ರೇಮಾನಂದ ಕೆ. ಮಲೇರಿಯಾ ನಿಯಂತ್ರಣದ ಬಗ್ಗೆ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು. 

Advertisement

ಈ ಸಂದರ್ಭ ಕಾರ್ಕಳ ತಾ| ಆರೋಗ್ಯ ಅಧಿಕಾರಿ ಕಚೆೇರಿಯ ಬಿ.ಎಚ್‌.ಇ.ಒ. ಶಶಿಧರ ವಿಶ್ವ ಜನಸಂಖ್ಯಾ ದಿನಾಚರಣೆ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ತಾ.ಪಂ. ಸದಸ್ಯರಾದ ಲಕ್ಷ್ಮೀ ದಯಾನಂದ, ರಮೇಶ್‌ ಪೂಜಾರಿ, ಶಿವಪುರ ಗ್ರಾ.ಪಂ. ಅಧ್ಯಕ್ಷೆ ಸುಗಂಧಿ ನಾಯ್ಕ, ಸ.ಪ್ರ.ದ. ಕಾಲೇಜಿನ ಪ್ರಾಂಶುಪಾಲ ಎಂ.ಆರ್‌. ಮಂಜುನಾಥ್‌, ಉಪನ್ಯಾಸಕ ಕೃಷ್ಣ, ಲಯನ್ಸ್‌ ಜಿಲ್ಲಾಧ್ಯಕ್ಷ ಟಿ.ಜಿ. ಆಚಾರ್ಯ, ಹೆಬ್ರಿ ಸಿಟಿ ಲಯನ್ಸ್‌ನ ನಿಯೋಜಿತ ಅಧ್ಯಕ್ಷ ಬೇಳಂಜೆ ಹರೀಶ್‌ ಪೂಜಾರಿ, ಎನ್‌.ಎಸ್‌.ಎಸ್‌. ಅಧಿಕಾರಿ ಗಣೇಶ್‌ ನಾಯಕ್‌ ಉಪಸ್ಥಿತರಿದ್ದರು. ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ನರಸಿಂಹ ನಾಯಕ್‌ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next