Advertisement
ಸುದ್ದಿಗಾರರೊಂದಿಗೆ ಮಾತನಾಡಿ,ಕ್ಷೇತ್ರದ ಸಂಸದರು ಘಟನೆ ನಡೆದ ದಿನವೇ ಸಂತ್ರಸ್ಥೆಯ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಬೇಕಿತ್ತು.ಆದರೆ ನಾಲ್ಕು ದಿನಗಳ ಬಳಿಕ ಬೇರೆ ಯಾವುದೋ ಕಾರ್ಯಕ್ರಮಕ್ಕೆ ಹೋದಾಗ ಮಳವಳ್ಳಿಗೆ ಭೇಟಿ ನೀಡಿದ್ದಾರೆ.ಇದಕ್ಕೂ ಮೊದಲೇ ಕ್ಷೇತ್ರದ ಜೆಡಿಎಸ್ ಶಾಸಕ ಅನ್ನದಾನಿ ಹಾಗು ನಾನು ಸಂತ್ರಸ್ಥೆಯ ಮನೆಗೆ ಭೇಟಿ ನೀಡಿ ಆತ್ಮಸ್ತೈರ್ಯ ತುಂಬುವ ಕೆಲಸ ಮಾಡಿದ್ದೇವೆ. ಬಾಲಕಿಯ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲೂ ಶಾಸಕ ಅನ್ನದಾನಿ ಶ್ರಮಿಸಿದ್ದಾರೆ ಎಂದು ನಿಖಿಲ್ ಹೇಳಿದರು.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಯುವಕರಿಗೆ 30% ಟಿಕೆಟ್ ಕೊಡಬೇಕೆಂದು ಮನವಿ ಮಾಡಿದ್ದೇನೆ. ಅದೇ ರೀತಿ ಯುವಕರು ಹೆಚ್ಚಿನ ಪ್ರಮಾಣದಲ್ಲಿ ರಾಜಕೀಯಕ್ಕೆ ಬರಬೇಕು. ಯುವಕರು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಗೆಲ್ಲುವ ಅರ್ಹತೆ ಇರುವ ಯುವ ನಾಯಕರು ಟಿಕೆಟ್ ಕೇಳಬೇಕು. ಈ ನಿಟ್ಟಿನಲ್ಲಿ ನಾವು ಕೂಡ ಸರ್ವೇ ಮಾಡಿಸುತ್ತಿದ್ದೇವೆ. ಗೆಲ್ಲುವ ಸಾಮರ್ಥ್ಯ ಇರುವ ಯುವ ನಾಯಕರಿಗೆ ಟಿಕೆಟ್ ಕೊಡುತ್ತೇವೆ ಎಂದರು.