Advertisement

ಪುರಸಭಾ ವ್ಯಾಪ್ತಿಯಲ್ಲಿ ಸಮಸ್ಯೆಗಳದ್ದೇ ದರ್ಬಾರ್‌!

04:08 PM Jan 09, 2020 | Naveen |

ಮಳವಳ್ಳಿ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ 2020-21ನೇ ಸಾಲಿನ ಬಜೆಟ್‌ಗೆ ಸಂಬಂಧಿಸಿದಂತೆ ಪುರಸಭೆ ಸದಸ್ಯರು, ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ಸ್ಥಳೀಯ ಮುಖಂಡರು ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಯಿತು.

Advertisement

ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ ಮಾತನಾಡಿ, ಪಟ್ಟಣದ 23 ವಾರ್ಡಿನ ಚರಂಡಿ ನೀರು ಗಂಗಾಮತ ಬಡಾವಣೆ ಯಲ್ಲಿರುವ ದೊಣ್ಣೆಹಳ್ಳದ ಮೂಲಕ ಹರಿದುಹೋಗುತ್ತಿದೆ. ಇದರಿಂದ ಈ ಹಳ್ಳದ ಅಕ್ಕ-ಪಕ್ಕದಲ್ಲಿರುವ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿದ್ದು, ಹಳ್ಳದ ಎರಡು ಕಡೆ ತಡೆಗೋಡೆ ನಿರ್ಮಿಸಿ ಚರಂಡಿ ನೀರು ಸರಾಗವಾಗಿ ಹೋಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.

ಪಟ್ಟಣದಲ್ಲಿರುವ ಸಾರ್ವಜನಿಕ ಸ್ಮಶಾನ ಅಭಿವೃದ್ಧಿಪಡಿಸಬೇಕು ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದ್ದು ಬೈಪಾಸ್‌ ರಸ್ತೆ ನಿರ್ಮಿಸಲು ಕ್ರಮ ಕೈಗೊಳ್ಳಬೇಕು, ಪುರಸಭೆ ಕಸ ಸಂಗ್ರಹಿಸಲು ಹೆಚ್ಚಿನ ವಾಹನಗಳನ್ನು ಖರೀದಿಸಬೇಕು ಎಂದು ಸಲಹೆ ನೀಡಿದರು.

ಹಸಿಕಸ ವಿಂಗಡಣೆ: ಪುರಸಭೆ ಮುಖ್ಯಾಧಿಕಾರಿ ಗಂಗಾಧರ್‌ ಮಾತನಾಡಿ, ಪಟ್ಟಣದ ವ್ಯಾಪ್ತಿಯಲ್ಲಿ ಪ್ರತಿದಿನ 18 ಟನ್‌ ಕಸ ಸಂಗ್ರಹವಾಗುತ್ತಿದ್ದು, ವಿಲೇವಾರಿ ಮಾಡಲು ಸಾರ್ವಜನಿಕರು ಒಣ ಕಸ ಮತ್ತು ಹಸಿಕಸ ವಿಂಗಡಣೆ ಮಾಡಿ ಪುರಸಭೆ ವಾಹನಗಳಗೆ ನೀಡಬೇಕು. ಕಸ ಸಂಗ್ರಹಿಸಲು ಈಗಾಗಲೇ ಐದು ಹೊಸ ಆಟೋ ಟಿಪ್ಪರ್‌ಗಳನ್ನು ಖರೀದಿಸಲು ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ ಉಳಿದಂತೆ ತಮ್ಮ ಸಲಹೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಮುಖ್ಯ ಸ್ಥಳಗಳಲ್ಲೇ ಶೌಚಾಲಯವಿಲ್ಲ: ಪಟ್ಟಣದಲ್ಲಿರುವ ಉದ್ಯಾನವನ ಗಳನ್ನು ಅಭಿವೃದ್ಧಿಪಡಿಸಬೇಕು. ಮುಖ್ಯ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು, ಶುದ್ಧ ಕುಡಿಯುವ ನೀರು ಘಟಕಗಳ ನಿರ್ಮಾಣ, ಹಲವು ಕಡೆ ಚರಂಡಿಗಳ ಸಮಸ್ಯೆ ಇದ್ದು, ಚರಂಡಿ ವ್ಯವಸ್ಥೆ ಕಲ್ಪಿಸಬೇಕು, ಬೀದಿದೀಪಗಳ ದುರಸ್ತಿ, ಬೇಡಿಕೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಎಂ.ಹೆಚ್‌. ಕೆಂಪಯ್ಯ ಹಾಗೂ ಹಲವು ಪುರಸಭೈ ಸದಸ್ಯರು, ಮುಖಂಡರಾದ ಜವಹರ್‌, ಗುರು, ಶ್ರೀನಿವಾಸ್‌, ವಕೀಲ ಗುರುಸ್ವಾಮಿ ಮತ್ತಿತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next