Advertisement

ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಖ್ಯಾತ ಮಲಯಾಳಂ ನಟಿ ಶರಣ್ಯ ಶಶಿ ಸಾವು  

06:06 PM Aug 09, 2021 | Team Udayavani |

ಕೇರಳ : ಬ್ರೇನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಮಲಯಾಳಂನ ಖ್ಯಾತ ಚಲನಚಿತ್ರ ಮತ್ತು ಕಿರುತೆರೆ ನಟಿ ಶರಣ್ಯ ಶಶಿ ಇಂದು (ಆ.09) ಕೊನೆಯುಸಿರೆಳೆದಿದ್ದಾರೆ.

Advertisement

35 ವರ್ಷದ ನಟಿ ಶರಣ್ಯಗೆ 2012 ರಲ್ಲಿ ಬ್ರೈನ್ ಟ್ಯೂಮರ್ ಪತ್ತೆಯಾಗಿತ್ತು. ಇದುವರೆಗೆ 11 ಮೇಜರ್ ಸರ್ಜರಿಗೆ ಒಳಗಾಗಿದ್ದ ಈಕೆಯ ಕಳೆದ ಮೇ 23 ರಂದು ಕೋವಿಡ್ ರೋಗಲಕ್ಷಣಗಳು ಕಾಣಿಸಿಕೊಂಡಿತ್ತು. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಕೋವಿಡ್ ವಿರುದ್ಧ ಸೆಣಸಿ ಗುಣಮುಖರಾಗಿ ಮನೆಗೆ ವಾಪಾಸ್ ಆಗಿದ್ದರು. ಆದರೆ, ನಂತರದ ದಿನಗಳಲ್ಲಿ ಅವರು ಮತ್ತೆ ಅನಾರೋಗ್ಯಕ್ಕೆ ಇಡಾಗಿದ್ದರು.

ಕಳೆದ ಕೆಲ ದಿನಗಳ ಹಿಂದೆ ತಿರುವನಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಸೋಮವಾರ ಮಧ್ಯಾಹ್ನ ಸಾವನ್ನಪ್ಪಿದ್ದಾರೆ.

ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಈ ನಟಿ ಅನೇಕ ಜನರಿಗೆ ಸ್ಫೂರ್ತಿಯಾಗಿದ್ದರು. ಕ್ಯಾನ್ಸರ್ ವಿರುದ್ಧ ನಟಿ ಧೈರ್ಯದಿಂದ ಹೋರಾಡಿದ್ದಕ್ಕಾಗಿ ವ್ಯಾಪಕವಾಗಿ ಪ್ರಶಂಸಿಸಲಾಗಿತ್ತು.

ಸಿನಿ ಪಯಣ :

Advertisement

ಶರಣ್ಯ ಅವರು ಮಲಯಾಳಂನ ಕಿರುತೆರೆಯಲ್ಲಿ ಫೇಮಸ್ ನಟಿಯಾಗಿದ್ದರು. ಮಂತರಕೋಡಿ, ಸೀತಾ ಹಾಗೂ ಹರಿಚಂದ್ರನಮ್ ಮುಂತಾದ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ಚೋಟಾ ಮುಂಬೈ, ಬಾಂಬೆ , ಥಲಪ್ಪವು ಸೇರಿದಂತೆ ಹಲವು ಸಿನಿಮಾಗಳಲ್ಲಿ ಸಹಾಯಕ ಪಾತ್ರಗಳಲ್ಲಿ ಇವರು ಕಾಣಿಸಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next