ಕೊಚ್ಚಿ: ಮಲಯಾಳಂನ ಖ್ಯಾತ ಚಲನಚಿತ್ರ ನಿರ್ದೇಶಕ ಸಿದ್ದಿಕ್ ಅವರು ಹೃದಯಾಘಾತದಿಂದ ಮಂಗಳವಾರ ನಿಧನ ಹೊಂದಿದರು.
ಹೃದಯಾಘಾತಕ್ಕೂ ಮುನ್ನ ನ್ಯುಮೋನಿಯಾ ಮತ್ತು ಯಕೃತ್ತಿನ ಕಾಯಿಲೆಗೆ ವೈದ್ಯಕೀಯ ಆರೈಕೆಯನ್ನು ಪಡೆಯುತ್ತಿದ್ದರು ಎನ್ನಲಾಗಿದ್ದು ಮಂಗಳವಾರ ಹೃದಯಾಘಾತಗೊಂಡು ನಿಧನ ಹೊಂದಿದರು ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿದೆ.
ಸಿದ್ದಿಕ್ ಅವರು ಪತ್ನಿ ಸಜಿತಾ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.
ಸಿದ್ದಿಕ್ ಅವರ ಪಾರ್ಥಿವ ಶರೀರವನ್ನು ಕಡವಂತರಾದ ರಾಜೀವ್ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ (ಆಗಸ್ಟ್ 9) ರಂದು ಬೆಳಿಗ್ಗೆ 9 ರಿಂದ 11:30 ರವರೆಗೆ ಇರಿಸಲಾಗುವುದು. ಸ್ಥಳದಲ್ಲಿ ಅಭಿಮಾನಿಗಳಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಬಳಿಕ ಅವರ ಮನೆಗೆ ಶವವನ್ನು ಸ್ಥಳಾಂತರಿಸಿ ಸಂಜೆ 6 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿದ್ದಾರೆ.
1986ರಲ್ಲಿ ತೆರೆಕಂಡ ‘ಪಪ್ಪನ್ ಪ್ರಿಯಪ್ಪೆತ್ತ ಪಪ್ಪನ್’ ಸಿನಿಮಾಗೆ ಚಿತ್ರಕತೆ ಬರೆಯುವುದರೊಂದಿಗೆ ಸಿನಿ ಪಯಣ ಆರಂಭಿಸಿದ ಸಿದ್ಧಿಕಿ, 1989ರಲ್ಲಿ ಬಿಡುಗಡೆಯಾದ ‘ರಾಮ್‌ಜಿ ರಾವ್ ಸ್ಪೀಕಿಂಗ್’ ಸಿನಿಮಾ ಮೂಲಕ ನಿರ್ದೇಶಕರಾದರು. ಮಲಯಾಳಂ ಮಾತ್ರವಲ್ಲದೆ ತಮಿಳು, ಹಿಂದಿಯಲ್ಲೂ ಸಿನಿಮಾ ನಿರ್ದೇಶಿಸಿದ ಖ್ಯಾತಿ ಅವರದ್ದು. ಗಾಡ್ಫಾದರ್’, ‘ಕಾಬೂಲಿವಾಲಾ’ ಸೇರಿದಂತೆ ಅನೇಕ ಸೂಪರ್ ಹಿಟ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ.
ಇದನ್ನೂ ಓದಿ: Gruha Jyothi Scheme: 191 ಯುನಿಟ್ ವಿದ್ಯುತ್ ಬಳಸಿದರೂ ಬಂದಿದೆ “ಬಿಲ್’!