Advertisement

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

08:39 PM May 06, 2024 | Team Udayavani |

ದುಬೈ: ದ್ವಿಪಕ್ಷೀಯ ಬಾಂಧವ್ಯ ಹದಗೆಟ್ಟ ಬಳಿಕ ಮಾಲ್ಡೀವ್ಸ್‌ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆ ಕ್ಷೀಣಿಸುತ್ತಿದ್ದು, ಪ್ರವಾಸೋದ್ಯಮವನ್ನು ಅವಲಂಬಿಸಿರುವ ನಮ್ಮ ದೇಶದ ಆರ್ಥಿಕತೆಗೆ ಕೊಡುಗೆ ನೀಡುವಂತೆ ದ್ವೀಪಸಮೂಹ ರಾಷ್ಟ್ರದ ಪ್ರವಾಸೋದ್ಯಮ ಸಚಿವರು ಸೋಮವಾರ ಭಾರತೀಯರನ್ನು ಒತ್ತಾಯಿಸಿದ್ದಾರೆ.

Advertisement

ಪಿಟಿಐ ವೀಡಿಯೋಗಳಿಗೆ ನೀಡಿದ ಸಂದರ್ಶನದಲ್ಲಿ, ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವ ಇಬ್ರಾಹಿಂ ಫೈಸಲ್ ಅವರು ತಮ್ಮ ದೇಶ ಮತ್ತು ಭಾರತದ ನಡುವಿನ ಐತಿಹಾಸಿಕ ಸಂಬಂಧಗಳನ್ನು ಒತ್ತಿ ಹೇಳಿದರು.

“ನಮಗೆ ಇತಿಹಾಸವಿದೆ. ಹೊಸದಾಗಿ ಚುನಾಯಿತರಾದ ನಮ್ಮ ಸರಕಾರ ಕೂಡ ಭಾರತದೊಂದಿಗೆ ಒಟ್ಟಾಗಿ ಕೆಲಸ ಮಾಡಲು ಬಯಸುತ್ತದೆ. ನಾವು ಯಾವಾಗಲೂ ಶಾಂತಿ ಮತ್ತು ಸೌಹಾರ್ದ ವಾತಾವರಣವನ್ನು ಉತ್ತೇಜಿಸುತ್ತೇವೆ. ನಮ್ಮ ಜನರು ಮತ್ತು ಸರ್ಕಾರವು ಭಾರತೀಯರ ಆಗಮನಕ್ಕೆ ಆತ್ಮೀಯ ಸ್ವಾಗತವನ್ನು ನೀಡುತ್ತದೆ. ಪ್ರವಾಸೋದ್ಯಮ ಸಚಿವನಾಗಿ, ದಯವಿಟ್ಟು ಮಾಲ್ಡೀವ್ಸ್‌ನ ಪ್ರವಾಸೋದ್ಯಮದ ಭಾಗವಾಗಲು ನಾನು ಭಾರತೀಯರಿಗೆ ಹೇಳಲು ಬಯಸುತ್ತೇನೆ. ನಮ್ಮ ಆರ್ಥಿಕತೆಯು ಪ್ರವಾಸೋದ್ಯಮದ ಮೇಲೆ ಅವಲಂಬಿತವಾಗಿದೆ ಎಂದು ಅಂಗಲಾಚಿದ್ದಾರೆ.

ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಮಾಲ್ಡೀವ್ಸ್‌ ನಂತರ ಮಾಲ್ಡೀವ್ಸ್‌ಗೆ ಸಂಪೂರ್ಣ ಹಿನ್ನಡೆಯಾಗಿದೆ.

ಕಳೆದ ವರ್ಷದ ಮೊದಲ ನಾಲ್ಕು ತಿಂಗಳಿಗೆ ಹೋಲಿಸಿದರೆ ಈ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಭಾರತದಿಂದ ಪ್ರವಾಸಿಗರ ಆಗಮನವು ಶೇಕಡಾ 42 ರಷ್ಟು ಕಡಿಮೆಯಾಗಿದೆ. ಈ ವರ್ಷದ ಆರಂಭದಲ್ಲಿ ಭಾರತವು ಮಾಲ್ಡೀವ್ಸ್‌ಗೆ ಅಗ್ರ ಪ್ರವಾಸಿ ಮಾರುಕಟ್ಟೆಯಾಗಿತ್ತು. ವರ್ಷದ ಕೆಲವೇ ದಿನಗಳಲ್ಲಿ, ಭಾರತವು ಅಗ್ರ ಪ್ರವಾಸಿ ಮಾರುಕಟ್ಟೆಗಳಲ್ಲಿ ಆರನೇ ಸ್ಥಾನಕ್ಕೆ ಇಳಿದಿದೆ ಎಂದು ನ್ಯೂಸ್ ಪೋರ್ಟಲ್ ವರದಿ ಮಾಡಿದೆ.

Advertisement

ಪ್ರವಾಸೋದ್ಯಮ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಮಾಲ್ಡೀವ್ಸ್ ಮೇ 4 ರ ಹೊತ್ತಿಗೆ ಭಾರತದಿಂದ ಒಟ್ಟು 43,991 ಪ್ರವಾಸಿಗರ ಆಗಮನವನ್ನು ದಾಖಲಿಸಿದೆ. ಕಳೆದ ವರ್ಷ ಜನವರಿ ಮತ್ತು ಏಪ್ರಿಲ್ ನಡುವೆ, ಮಾಲ್ಡೀವ್ಸ್ 73,785 ಪ್ರವಾಸಿಗರ ಆಗಮನವನ್ನು ದಾಖಲಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next