Advertisement

ಮಹಿಳಾ ಚೆಸ್‌ ಪಂದ್ಯಕ್ಕೆ ಬುರ್ಖಾ ಧರಿಸಿ ಬಂದ ಯುವಕ: ಸತತ ಗೆಲುವಿನಿಂದ ನಿಜವಾದ ಮುಖವಾಡ ಬಯಲು

12:47 PM Apr 15, 2023 | Team Udayavani |

ನೈರೋಬಿ: ಆರ್ಥಿಕ ಸಂಕಷ್ಟದಲ್ಲಿರುವಾಗ ಹಣಗಳಿಸಲು ಮನುಷ್ಯ ನಾನಾ ಅವತಾರದಲ್ಲಿ ಕಾಣಿಸಿಕೊಂಡು ಕಳ್ಳತನ, ಮೋಸ, ಹಣ ಲೂಟಿಯಂತಹ ದುಷ್ಕೃತ್ಯಗಳನ್ನು ಮಾಡಲು ಇಳಿಯುತ್ತಾನೆ. ಇಂಥದ್ದೇ ಒಂದು ಘಟನೆ ಕೀನ್ಯಾದಲ್ಲಿ ನಡೆದಿದೆ.

Advertisement

ಕೀನ್ಯಾದಲ್ಲಿ ಕಳೆದ ವಾರ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿ ನಡೆದಿದೆ. ಈ ಪಂದ್ಯಾವಳಿಯಲ್ಲಿ ಬುರ್ಖಾ ಹಾಕಿಕೊಂಡು ಮಹಿಳೆಯಂತೆ ಪುರುಷ ವ್ಯಕ್ತಿಯೊಬ್ಬ ಸ್ಪರ್ಧಾಳಾಗಿ ಭಾಗವಹಿಸಿ ಸಿಕ್ಕಿ ಬಿದ್ದಿದ್ದಾನೆ ಎಂದು ಬಿಬಿಸಿ ವರದಿ ತಿಳಿಸಿದೆ.

ಕೀನ್ಯಾ ಮೂಲದ ಸ್ಟಾನ್ಲಿ ಒಮೊಂಡಿ ಎಂಬ ವ್ಯಕ್ತಿ ಆರ್ಥಿಕವಾಗಿ ತೀರ ಸಂಕಷ್ಟದಲ್ಲಿದ್ದಾನೆಂದು, ಹಣಗಳಿಸುವ ಉದ್ದೇಶದಿಂದ ನೈರೋಬಿಯಲ್ಲಿ ನಡೆದ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿಯಲ್ಲಿ ಭಾಗಿಯಗಿದ್ದಾನೆ. ತನ್ನ ಪರಿಚಯ ಯಾರಿಗೂ ತಿಳಿಯಬಾರದೆನ್ನುವ ಕಾರಣದಿಂದ ಬುರ್ಖಾವನ್ನು ಧರಿಸಿಕೊಂಡು, ಕನ್ನಡಕವೊಂದನ್ನು ಹಾಕಿಕೊಂಡು ತನ್ನ ಹೆಸರು ಮಿಲಿಸೆಂಟ್ ಅವರ್ ಎಂದು ರಿಜಿಸ್ಟಾರ್‌ ಮಾಡಿಸಿ, ಮಹಿಳಾ ಸ್ಪರ್ಧಿಗಳೊಂದಿಗೆ ಚೆಸ್‌ ನ್ನು ಆಡಿದ್ದಾನೆ.

ಈತ ಸತತ ಗೆಲುವು ಸಾಧಿಸಿಕೊಂಡು ಹೋಗುತ್ತಿದ್ದರಿಂದ ಸಂಶತಗೊಂಡ ಪಂದ್ಯಾಕೂಟದ ಸಿಬ್ಬಂದಿ ಆತನನ್ನು ವಿಚಾರಿಸಿದ್ದಾರೆ. ನಾಲ್ಕನೇ ಸುತ್ತಿನ ಬಳಿಕ ಖಾಸಗಿ ಕೋಣೆಗೆ ಕರೆದುಕೊಂಡು ಬುರ್ಖಾ ತೆಗೆಯುವಂತೆ ಹೇಳಿದ್ದಾರೆ. ಆಗ ಸ್ಟಾನ್ಲಿ ಒಮೊಂಡಿನಿಯ ನಿಜವಾದ ಮುಖವಾಡ ಬಯಲಾಗಿದೆ.

ನಾನೊಬ್ಬ ಯೂನಿವರ್ಸಿಟಿ ವಿದ್ಯಾರ್ಥಿ ಹಾಗೂ ಚೆಸ್‌ ಆಟಗಾರ. ನನಗೆ ಹಣಕಾಸಿನ ತೀರ ಅಗತ್ಯಯಿದ್ದ ಕಾರಣ ಈ ರೀತಿ ಮಾಡಿದೆ. ನನ್ನ ತಪ್ಪಿಗೆ ನೀಡುವ ಶಿಕ್ಷೆಯನ್ನು ಸ್ವೀಕರಿಸಲು ಸಿದ್ದವೆಂದು ಅಧಿಕಾರಿಗಳ ಮುಂದೆ ಸ್ಟಾನ್ಲಿ ಒಮೊಂಡಿನಿ ಹೇಳಿಕೊಂಡಿದ್ದಾನೆ.

Advertisement

ಈ ವರ್ಷದ ಚೆಸ್‌ ಪಂದ್ಯಾವಳಿಯಲ್ಲಿ 22 ದೇಶಗಳಿಂದ 400 ಆಟಗಾರ್ತಿಯರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next