Advertisement

ಡಿ.12 ರಿಂದ 14ರ ವರೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತಾಧಿಗಳಿಗೆ ಪ್ರವೇಶ ನಿಷೇಧ

06:56 PM Dec 08, 2020 | sudhir |

ಹನೂರು(ಚಾಮರಾಜನಗರ) :ಧಾರ್ಮಿಕ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಇದೇ ತಿಂಗಳ 12 ರಿಂದ 14ರವರೆಗೆ 3 ದಿನಗಳ ಕಾಲ ಭಕ್ತಾದಿಗಳ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ|ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ.

Advertisement

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ವಾರಾಂತ್ಯ, ಎಣ್ಣೆಮಜ್ಜನ ಸೇವೆ, ಅಮಾವಾಸ್ಯೆ ಪೂಜಾ ಕೈಂಕರ್ಯ, 5ನೇ ಕಾರ್ತಿಕ ಸೋಮವಾರ ಮತ್ತು ತೆಪ್ಪೋತ್ಸವದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಅಂದಾಜಿಸಲಾಗಿದೆ. ಈ ಹಿನ್ನೆಲೆ ಕೋವಿಡ್-19 ನಿಯಮಾವಳಿ ಪಾಲನೆ ಮಾಡಲು ಕಷ್ಟವಾಗುತ್ತದೆ. ಹಾಗಾಗಿ ಭಕ್ತಾಧಿಗಳ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಠಿಯಿಂದ ಹಾಗೂ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ 3 ದಿನಗಳ ಕಾಲ ಭಕ್ತಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸುವಂತೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಮನವಿ ಪತ್ರ ಸಲ್ಲಿಸಿದ್ದರು.

ಈ ಹಿನ್ನೆಲೆ ಡಿಸೆಂಬರ್ ತಿಂಗಳ 12 ರಿಂದ 14 (ಶನಿವಾರ, ಭಾನುವಾರ ಮತ್ತು ಸೋಮವಾರ) ಭಕ್ತಾದಿಗಳ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ|ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:ಲಾಟರಿಯಲ್ಲಿ ಒಲಿದ ಅದೃಷ್ಟ: ಭಕ್ತರಹಳ್ಳಿ MPCSನಲ್ಲಿ ಮತ್ತೊಮ್ಮೆ ಜೆಡಿಎಸ್‍ಗೆ ಅಧಿಕಾರ

Advertisement

Udayavani is now on Telegram. Click here to join our channel and stay updated with the latest news.

Next