Advertisement

ನಿರ್ಬಂಧ ತೆರವು : ಮಲೆ ಮಹದೇಶ್ವರ ಬೆಟ್ಟದ ರಥೋತ್ಸವದಲ್ಲಿ ಪಾಲ್ಗೊಳ್ಳಲು ಭಕ್ತರಿಗೆ ಅವಕಾಶ

07:43 PM Mar 01, 2022 | Team Udayavani |

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಜಾತ್ರಗೆ ವಿಧಿಸಲಾಗಿದ್ದ ಎಲ್ಲ ನಿರ್ಬಂಧಗಳನ್ನು ಹಿಂತೆಗೆದುಕೊಳ್ಳಲಾಗಿದ್ದು, ಕ್ಷೇತ್ರದಲ್ಲಿ ಭಕ್ತರಿಗೆ ವಾಸ್ತವ್ಯ, ರಥೋತ್ಸವಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ವಸತಿ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ತಿಳಿಸಿದರು.

Advertisement

ಮಲೆ ಮಹದೇಶ್ವರ ಬೆಟ್ಟದ ನಾಗ ಮಲೆಭವನದಲ್ಲಿ ಮಂಗಳವಾರ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮಲೆ ಮಹದೇಶ್ವರ ಬೆಟ್ಟದ ಜಾತ್ರಾ ಸಂಬಂಧ ಮುಖ್ಯ ಮಂತ್ರಿಯವರೊಂದಿಗೆ ತಾವು ಮಾತನಾಡಿದ್ದು ಸ್ಥಳೀಯವವಾಗಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲು ತಿಳಿಸಿದ್ದರು.

ಅದರಂತೆ ಜಿಲ್ಲೆಯ ಶಾಸಕರೊಂದಿಗೆ ಇಂದು ತಾವು ಸಮಾಲೋಚಿಸಿ ಸಭೆ ನಡೆಸಿ ಕೋವಿಡ್ ತಗ್ಗಿರುವ ಕಾರಣ ಹಾಗೂ ಇತರೆ ಭಾಗಗಳಲ್ಲಿಯೂ ಜನರಿಗೆ ಪೂಜಾ ಮಹೋತ್ಸವಗಳಿಗೆ ಅವಕಾಶ ಇರುವುದರಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿಯೂ ಶಿವರಾತ್ರಿ ಸಂದರ್ಭದಲ್ಲಿ ಭಕ್ತಾಧಿಗಳಿಗೆ ಯಾವುದೇ ನಿರ್ಬಂಧ ವಿಧಿಸದೇ ಇರಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸೋಮಣ್ಣ ತಿಳಿಸಿದರು.

ಇದನ್ನೂ ಓದಿ : ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ತಂದೆಗೆ ಮೋದಿ ಕರೆ, ಸಾಂತ್ವನ

Advertisement

ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಸಂದರ್ಭಕ್ಕಾಗಿ ವಿಧಿಸಲಾಗಿದ್ದ ನಿರ್ಬಂಧ ಹಿಂಪಡೆದಿರುವ ಕಾರಣ ಭಕ್ತರಿಗೆ ಯಾವುದೇ ತೊಂದರೆ ಇಲ್ಲ. ಭಕ್ತರು ಕ್ಷೇತ್ರಕ್ಕೆ ಆಗಮಿಸಬಹುದು. ವಾಸ್ತವ್ಯ ಹೂಡಬಹುದು. ಶಿವರಾತ್ರಿ ರಥೋತ್ಸವದಲ್ಲೂ ಪಾಲ್ಗೊಳ್ಳಬಹುದು ಎಂದು ಉಸ್ತುವಾರಿ ಸಚಿವರು ತಿಳಿಸಿದರು.

ಭಕ್ತರು ಕೋವಿಡ್ ನಿಯಮ ಪಾಲನೆ ಮಾಡಬೇಕು. ಮಾಸ್ಕ್ , ಸ್ಯಾನಿಟೈಸ್ ಬಳಕೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.

ಶಿವರಾತ್ರಿ ಮಹೋತ್ಸವಕ್ಕಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ವಾಸ್ತವ್ಯ, ಪ್ರಸಾದ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತದೆ. ಅಧಿಕಾರಿಗಳಿಗೆ ಈ ಬಗ್ಗೆ ಸೂಚಿಸಲಾಗಿದೆ ಎಂದರು.

ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶಾಸಕರಾದ ಆರ್.ನರೇಂದ್ರ, ಎನ್.ಮಹೇಶ್, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ, ಜಿಪಂ. ಸಿಇಓ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಮತ್ತು ಇತರೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next