Advertisement

Male Mahadeshwara Temple; ಮಾದಪ್ಪನ ಹುಂಡಿ ಎಣಿಕೆ: ಒಂದೇ ತಿಂಗಳಲ್ಲಿ 2.90 ಕೋಟಿ ಸಂಗ್ರಹ

06:23 PM Jan 04, 2024 | Team Udayavani |

ಹನೂರು (ಚಾಮರಾಜನಗರ): ನಾಡಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆ ಮಲೆಮಹದೇಶ್ವರ ಬೆಟ್ಟದ ಮಹದೇಶ್ವರ ದೇವಸ್ಥಾನದಲ್ಲಿ ನಡೆದ ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 33 ದಿನದ ಅವಧಿಯಲ್ಲಿ 2.90 ಕೋಟಿ ರೂ ಸಂಗ್ರಹವಾಗಿದೆ.

Advertisement

ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಗ್ಗೆ ಸಾಲೂರು ಬೃಹನ್ಮಾಠಧ್ಯಕ್ಷ ವಿದ್ವಾನ್ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು.

ಹೊಸ ವರ್ಷ, ಅಮಾವಾಸ್ಯೆ, ಹುಣ್ಣಿಮೆ ಹಾಗೂ ಸರ್ಕಾರಿ ರಜಾ ದಿನಗಳಂದು ಬೆಂಗಳೂರು, ಕನಕಪುರ, ಚನ್ನಪಟ್ಟಣ, ರಾಮನಗರ, ಮೈಸೂರು, ಮಂಡ್ಯ, ಚಾ.ನಗರ, ಮಳವಳ್ಳಿ ಸೇರಿದಂತೆ ರಾಜ್ಯದ ಇನ್ನಿತರೆ ಕಡೆಗಳಿಂದ ಸಾವಿರಾರು ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಈ ವೇಳೆ ಭಕ್ತರು ಇಷ್ಟಾರ್ಥವಾಗಿ ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದರು.

ಈ ದಿಸೆಯಲ್ಲಿ ಬುಧವಾರ ನಡೆದ ಹುಂಡಿ ಎಣಿಕೆಯಲ್ಲಿ 33 ದಿನದ ಅವಧಿಯಲ್ಲಿ ಈ ಬಾರಿ 2,90,00,732 ರೂ ನಗದು, 102 ಗ್ರಾಂ ಚಿನ್ನ ಹಾಗೂ 3.355ಕೆ.ಜಿ ಬೆಳ್ಳಿ ಸಂಗ್ರಹವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next