ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರನ ಹುಂಡಿಯಲ್ಲಿ 2.27 ಕೋಟಿ ರೂ. ನಗದು, 57ಗ್ರಾಂ ಚಿನ್ನ ಹಾಗೂ 3.800 ಕೆ.ಜಿ ಬೆಳ್ಳಿ ಸಂಗ್ರಹವಾಗಿವೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಖಾಸಗಿ ಬಸ್ ನಿಲ್ದಾಣದ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ಬೆಳಗ್ಗೆ 7.30ಕ್ಕೆ ಪ್ರಾರಂಭವಾದ ಹುಂಡಿ ಎಣಿಕೆ ಪ್ರಕ್ರಿಯೆಯು ತಡರಾತ್ರಿ 9:30ರವರೆಗೂ ಜರುಗಿತು.
ಹುಂಡಿ ಎಣಿಕೆ ಪ್ರಕ್ರಿಯೆಯು ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಶ್ರೀಗಳ ದಿವ್ಯಸಾನ್ನಿಧ್ಯದಲ್ಲಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಕ್ಷಮದಲ್ಲಿ ಸಿಸಿ ಟೀವಿ ಕಣ್ಗಾವಲಿನಲ್ಲಿ ಜರುಗಿತು.
ಈ ಬಾರಿಯ ಹುಂಡಿ ಎಣಿಕೆಯಲ್ಲಿ ಕಳೆದ 22 ದಿನಗಳಲ್ಲಿ 2,27,66,834(ಎರಡು ಕೋಟಿ ಇಪ್ಪತ್ತೇಳು ಲಕ್ಷದ ಅರವತ್ತಾರು ಸಾವಿರದ ಎಂಟು ನೂರ ಮೂವತ್ತ ನಾಲ್ಕು) ರೂ. ನಗದು, 170ಗ್ರಾಂ ಚಿನ್ನದ ಪದಾರ್ಥಗಳು ಮತ್ತು 3 ಕೆ.ಜಿ.800ಗ್ರಾಂ ಬೆಳ್ಳಿಯ ಪದಾರ್ಥಗಳು ಸಂಗ್ರಹವಾಗಿವೆ. ಕೊರೊನಾ ಕಾಣಿಸಿಕೊಂಡು ಬಳಿಕ ಅಂದರೆ ಕಳೆದ ಎರಡು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ
ಹುಂಡಿಯಲ್ಲಿ ಅತಿ ಹೆಚ್ಚು ಹಣ ಸಂಗ್ರಹವಾಗಿದೆ.
ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮು, ಉಪಕಾರ್ಯದರ್ಶಿ ಬಸವರಾಜು, ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ, ಮಹದೇಶ್ವರ ಬೆಟ್ಟ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ಭಾಗವಹಿಸಿದ್ದರು. ಮ.ಬೆಟ್ಟ ಪೊಲೀಸ್ ಇಲಾಖಾ ಅಧಿಕಾರಿಗಳು ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದರು.