Advertisement
ಬೆಟ್ಟದ ಖಾಸಗಿ ಬಸ್ ನಿಲ್ದಾಣ ಸಮೀಪದ ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಜರುಗಿದ ಹುಂಡಿ ಎಣಿಕೆ ಕಾರ್ಯ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಶ್ರೀಗಳ ದಿವ್ಯಸಾನ್ನಿಧ್ಯದಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 8.30ರವರೆಗೂ ಸಿಸಿಟಿವಿ ಕಣ್ಗಾವಲಿನಲ್ಲಿ ಜರುಗಿತು.
ಈ ಬಾರಿ ಮಲೆ ಮಾದಪ್ಪನ ಹುಂಡಿಯಲ್ಲಿ ಕಳೆದ 39 ದಿನಗಳ ಅವಧಿಯಲ್ಲಿ 2,28,63,914 ರೂ. ನಗದು, 92.50ಗ್ರಾಂ ಚಿನ್ನದ ಪದಾರ್ಥ ಮತ್ತು 2.746 ಗ್ರಾಂ ಬೆಳ್ಳಿ ಪದಾರ್ಥಗಳು ಸಂಗ್ರಹವಾಗಿದೆ. ಈ ಬಾರಿ ಮಾದಪ್ಪನ ಹುಂಡಿಯಲ್ಲಿ 27.50 ಗ್ರಾಮ ತೂಕದ ರುದ್ರಾಕ್ಷಿ ಸಮೇತ ಚಿನ್ನದ ಸರ ದೊರೆತಿದ್ದು ವಿಶೇಷವಾಗಿದೆ. ಬಿಗಿ ಬಂದೋಬಸ್ತ್:
ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಉಪಕಾರ್ಯದರ್ಶಿ ಚಂದ್ರಶೇಖರ್, ಪ್ರಾಧಿಕಾರದ ಅಧಿಕಾರಿ ಮತ್ತು ಸಿಬ್ಬಂದಿ, ಬ್ಯಾಂಕಿನ ವ್ಯವಸ್ಥಾಪಕರು, ಸಿಬ್ಬಂದಿ ಭಾಗವಹಿಸಿದ್ದರು. ಮಲೆ ಮಹದೇಶ್ವರ ಬೆಟ್ಟದ ಇನ್ಸ್‌ಪೆಕ್ಟರ್ ನಂಜುಂಡಸ್ವಾಮಿ ಮತ್ತು ಸಿಬ್ಬಂದಿ ಬಿಗಿ ಬಂದೊಬಸ್ತ್ ಕೈಗೊಂಡಿದ್ದರು.
Related Articles
ಕಳೆದ 39 ದಿನಗಳಲ್ಲಿ ಶ್ರೀ ಕ್ಷೇತ್ರಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸಿದ್ದರು. ಸಾಮೂಹಿಕ ವಿವಾಹ ಮಹೋತ್ಸವ ಏರ್ಪಡಿಸಿದ್ದ ಹಿನ್ನೆಲೆ ಮುಖ್ಯಮಂತ್ರಿಗಳೂ ಆಗಮಿಸಿದ್ದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ವಧು-ವರರ ಸಂಬಂಧಿಕರು, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಇರುವ ಹಿನ್ನೆಲೆ ವಾರಾಂತ್ಯ, ಸರ್ಕಾರಿ ರಜೆ ದಿನಗಳಲ್ಲಿ ಹೆಚ್ಚಿನ ಭಕ್ತರು ಶ್ರೀ ಕ್ಷೇತ್ರದತ್ತ ಆಗಮಿಸಿದ್ದರು.
Advertisement