Advertisement

ಮಾದಪ್ಪನ ಹುಂಡಿಯಲ್ಲಿ 80 ಗ್ರಾಂ ಚಿನ್ನ ಸಂಗ್ರಹ

03:20 PM Jul 16, 2022 | Team Udayavani |

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಕಳೆದ 27 ದಿನಗಳಲ್ಲಿ 1.70 ಕೋಟಿ ನಗದು, 80 ಗ್ರಾಂ ಚಿನ್ನ ಮತ್ತು 1,400 ಕೆ.ಜಿ ಬೆಳ್ಳಿ ಸಂಗ್ರಹವಾಗಿದೆ.

Advertisement

ರಾಜ್ಯದ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರಬೆಟ್ಟದ ಖಾಸಗಿ ಬಸ್‌ ನಿಲ್ದಾಣ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ಬೆಳಗ್ಗೆ 8ಗಂಟೆಗೆ ಪ್ರಾರಂಭವಾದ ಹುಂಡಿ ಎಣಿಕೆ ಪ್ರಕ್ರಿಯೆ ರಾತ್ರಿವರೆಗೂ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಜರುಗಿತು.

ಈ ಬಾರಿ ಕಳೆದ 27 ದಿನಗಳ ಅವಧಿಯಲ್ಲಿ ಮಲೆ ಮಾದಪ್ಪನ ಹುಂಡಿಯಲ್ಲಿ 1,70,65,814 (ಒಂದು ಕೋಟಿ ಎಪ್ಪತ್ತು ಲಕ್ಷದ ಅರವತ್ತೈದು ಸಾವಿರದ ಎಂಟು ನೂರ ಹದಿನಾಲ್ಕು) ರೂ. ನಗದು 80 ಗ್ರಾಂ ಚಿನ್ನ ಮತ್ತು 1.4 ಕೆ.ಜಿ ಬೆಳ್ಳಿ ಸಂಗ್ರಹವಾಗಿವೆ.

ಹುಂಡಿ ಎಣಿಕೆ ಪ್ರಕ್ರಿಯೆಯು ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನಶ್ರೀಗಳ ದಿವ್ಯಸಾನ್ನಿಧ್ಯದಲ್ಲಿ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿದೇವಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಉಪಕಾರ್ಯದರ್ಶಿ ಬಸವರಾಜು, ಲೆಕ್ಕಾಧಿಕ್ಷಕ ಪ್ರವೀಣ್‌ ಪಾಟೀಲೊ, ಮಹದೇಶ್ವರ ಬೆಟ್ಟದ ಎಸ್‌ಬಿಐ ಬ್ಯಾಂಕಿನ ವ್ಯವಸ್ಥಾಪಕರು, ಅಧಿಕಾರಿ, ಸಿಬ್ಬಂದಿ ಹಾಗೂ ಪ್ರಾಧಿಕಾರದ ಅಧಿಕಾರಿ ಮತ್ತು ಸಿಬ್ಬಂದಿ ಹಾಜರಿದ್ದರು. ಹುಂಡಿ ಎಣಿಕೆ ಪ್ರಕ್ರಿಯೆಹಿನ್ನೆಲೆ ಮಹದೇಶ್ವರ ಬೆಟ್ಟ ವೃತ್ತ ನಿರೀಕ್ಷಕ ಬಸವರಾಜು ಬಿಗಿಬಂದೋಬಸ್ತ್ ಏರ್ಪಡಿಸಿದ್ದರು.

Advertisement

ಮಾದಪ್ಪನ ಹಣ ಕದ್ದ ನೌಕರನ ಬಂಧನ:

ಮಲೆ ಮಾದಪ್ಪನ ಹುಂಡಿ ಎಣಿಕೆ ಪ್ರಕ್ರಿಯೆ ಜರುಗುತ್ತಿದ್ದ ವೇಳೆ ಪ್ರಾಧಿಕಾರದ ಹೊರಗುತ್ತಿಗೆ ನೌಕರನೋರ್ವ 40 ಸಾವಿರ ಹಣ ಕದ್ದು ಪೊಲೀಸರ ಅತಿಥಿಯಾಗಿದ್ದಾನೆ.

ಹುಂಡಿ ಎಣಿಕೆ ಪ್ರಕ್ರಿಯೆಯ ವೇಳೆ ಪ್ರಾಧಿಕಾರದ ಹೊರಗುತ್ತಿಗೆ ನೌಕರ ಪನ್ನೀರ್‌ ಸೆಲ್ವಂ 500 ರೂ. ಮುಖಬೆಲೆಯ 80 ನೋಟುಗಳನ್ನು ಕಳ್ಳತನ ಮಾಡಿದ್ದನು. ಈ ವೇಳೆ ಪನ್ನೀರ್‌ಸೆಲ್ವಂ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದುದನ್ನು ಗಮನಿಸಿದ ಅಧಿಕಾರಿಗಳು ಆತನನ್ನು ತಪಾಸಣೆಗೊಳ ಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಕೂಡಲೇ ಪ್ರಾಧಿಕಾರದ ಉಪಕಾರ್ಯದರ್ಶಿ ಬಸವರಾಜು ಪೊಲೀಸರಿಗೆ ದೂರು ನೀಡಿದ್ದು, ಮಹದೇಶ್ವರ ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next