Advertisement

ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿದ ಪುರುಷ ದಾದಿ; ಫೋಟೋಗಳು ವೈರಲ್

05:15 PM Mar 02, 2023 | Team Udayavani |

ಕೋಯಿಕೋಡ್: ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಆಕೆಯ ನಗ್ನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ 24 ವರ್ಷದ ಪುರುಷ ದಾದಿಯೊಬ್ಬನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

Advertisement

ಕಳೆದ ವರ್ಷ ಡಿಸೆಂಬರ್‌ನಲ್ಲಿ ಇಬ್ಬರೂ ಕರ್ನಾಟಕದ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತ್ರಿಶೂರ್ ಜಿಲ್ಲೆಯ ನಿಶಾಮ್ ಬಾಬು ಎಂಬಾತ 28 ವರ್ಷದ ವೈದ್ಯೆಗೆ ಕೊಯಮತ್ತೂರಿನ ಆಸ್ಪತ್ರೆಯಲ್ಲಿ ಹೊಸ ಉದ್ಯೋಗವನ್ನು ವ್ಯವಸ್ಥೆ ಮಾಡುವುದಾಗಿ ಸುಳ್ಳು ಭರವಸೆ ನೀಡಿ ಅತ್ಯಾಚಾರವೆಸಗಿದ್ದಾನೆ.

ಹೋಟೆಲ್‌ನಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಬಲೆಗೆ ಬೀಳಿಸಿ ಆಕೆಯ ನಗ್ನ ಫೋಟೋಗಳನ್ನು ತೆಗೆಯಲಾಗಿದೆ. ನಂತರ ನಗ್ನ ಫೋಟೋಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕುವ ಮೂಲಕ ಲೈಂಗಿಕ ದೌರ್ಜನ್ಯ ಎಸಗಲಾಗಿದೆ.

ಅಪಾಯವನ್ನು ಗ್ರಹಿಸಿದ ಸಂತ್ರಸ್ತ ವೈದ್ಯೆ ಆತನ ಮೊಬೈಲ್ ಸಂಖ್ಯೆಯನ್ನು ನಿರ್ಬಂಧಿಸಿದ್ದಾರೆ ಎಂದು ವರದಿಯಾಗಿದೆ. ನಂತರ ಆರೋಪಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಬು ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರಲ್ಲಿ ಸೆಕ್ಷನ್ 67 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next