Advertisement
ಪಟ್ಟಣದ ಪುರಸಭೆಯಲ್ಲಿ ಮಂಗಳವಾರ ನಡೆದ ಕೊರೊನಾ ವೈರಸ್ ಸೊಂಕು ಹರಡದಂತೆ ತಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತ ಸಭೆಯಲ್ಲಿ ಮಾತನಾಡಿದರು. ಕೊರೊನಾ ವೈರಸ್ ಬಾರದಂತೆ ಜನರು ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಅಥವಾ ಸೋಪಿನಿಂದ ಕೈಯನ್ನು ಸ್ವತ್ಛಗೊಳಿಸುತ್ತಿರಬೇಕು. ಕೈಯಿಂದ ಪದೇ ಪದೇ ಕಣ್ಣು, ಮೂಗು, ಮುಖ ಮುಟ್ಟಿಕೊಳ್ಳಬಾರದು. ವ್ಯಕ್ತಿಗಳಿಂದ ಕನಿಷ್ಟ ಒಂದು ಮೀಟರ್‌ನಷ್ಟು ಅಂತರ ಕಾಯ್ದುಕೊಳ್ಳಬೇಕು ಎಂದರು.
Related Articles
Advertisement
ಉಪ ತಹಶೀಲ್ದಾರ್ ಆರ್.ರವಿ ಮಾತನಾಡಿ, ವಾರ್ಡ್‌ಗಳಲ್ಲಿ ಸ್ವತ್ಛತೆಗೆ ಆದ್ಯತೆ ನೀಡಬೇಕು. ಕೊರೊನಾ ಕುರಿತು ಬಸ್ ನಿಲ್ದಾಣದಲ್ಲಿ ಹೆಲ್ಪ್ ಡೆಸ್ಕ್ ಮಾಡುವುದು ಉತ್ತಮ ಎಂದರು. ಕೊರೋನಾ ವೈರಸ್ ಹಾಗೂ ಹಕ್ಕಿ ಜ್ವರ ಹರಡದಂತೆ ಪಟ್ಟಣದ ಸಂತೆ ಮಾರುಕಟ್ಟೆಯಲ್ಲಿನ ಕೋಳಿ, ಕುರಿ, ಮಟನ್ ಮಾರುಕಟ್ಟೆ ಬಂದ್ ಮಾಡುವಂತೆ ನೋಟಿಸ್ ಕೊಟ್ಟಿದ್ದು, ಈಗಾಗಲೇ ಬಂದ್ ಮಾಡಲಾಗಿದೆ ಎಂದು ಪ್ರಭಾರಿ ಮುಖ್ಯಧಿಕಾರಿ ಉಮೇಶ್ ತಿಳಿಸಿದರು. ಕಂದಾಯ ಮತ್ತು ಪುರಸಭೆ ಅಧಿಕಾರಿಗಳು, ಸದಸ್ಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.