Advertisement
ಬೆಳ್ತಂಗಡಿ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಮದನ್ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಕುಂದುಕೊರತೆ ಪರಿಶೀಲನ ಸಭೆ ಜರಗಿತು.ಯಂತ್ರಗಳನ್ನು ಬಳಸಿ ರಸ್ತೆಗಳನ್ನು ದುರಸ್ತಿ ಮಾಡಲು ಅರಣ್ಯ ಇಲಾಖೆ ಅಡ್ಡಿಪಡಿಸುತ್ತಿರುವ ಬಗ್ಗೆ ಜಯಾನಂದ ಪಿಲಿಕಳ ಹಾಗೂ ಪರಮೇಶ್ ತಿಳಿಸಿದರು. ಆದರೆ ಯಂತ್ರಗಳ ಬಳಕೆ ಸಾಧ್ಯವಾಗುವುದಿಲ್ಲ ಎಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ವಲಯಾಧಿಕಾರಿ ಕಿರಣ್ ತಿಳಿಸಿದರು. ಅರಣ್ಯ ಇಲಾಖೆಯವರೇ ಕುದುರೆಮುಖ ರಾಷ್ಟ್ರೀಯ ಉದ್ಯಾನ ವನದೊಳಗೆ ಯಂತ್ರಗಳನ್ನು ಬಳಸಿ ಹೊಸ ರಸ್ತೆ ಮಾಡುತ್ತಿದ್ದಾರೆ. ಅವರಿಗೆ ಅವಕಾಶವಿದೆಯಾದರೆ ನಮಗೆ ಯಾಕಿಲ್ಲ ಎಂದು ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಇರುವ ಮೂರು ಪ್ರದೇಶಗಳಿಗೆ ವಿದ್ಯುತ್ ಸಂಪರ್ಕಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ವರ್ಷಗಳೇ ಕಳೆದರೂ ಇನ್ನೂ ಮಂಜೂರಾತಿ ದೊರೆತಿಲ್ಲ, ಈ ಬಗ್ಗೆ ಮಾಹಿತಿ ಇಲ್ಲವಾಗಿದೆ ಎಂದು ತಿಳಿಸಿದಾಗ ಈ ಅರ್ಜಿಗಳು ಪರಿಶೀಲನೆಯ ಹಂತದಲ್ಲಿದ್ದು ಅನುಮೋದನೆ ದೊರೆಕಲಿದೆ ಎಂದು ಮೆಸ್ಕಾಂ ಎಂಜಿನಿಯರ್ ಶಿವಶಂಕರ್ ತಿಳಿಸಿದರು.
Related Articles
Advertisement
ಇದಕ್ಕೆ ಉತ್ತರಿಸಿದ ತಹಶೀಲ್ದಾರ್ ರಸ್ತೆ ವ್ಯವಸ್ಥೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಒಳಗೆ ಹಾಗೂ ಅರಣ್ಯಕ್ಕೆ ತಾಗಿಕೊಂಡಿರುವ ಇತರೆಡೆಗಳಲ್ಲಿ ಜಮೀನಿನ ಬಗ್ಗೆ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ನಡುವೆ ಗೊಂದಲವಿದ್ದು ಇದರಿಂದಾಗಿ ಮೂಲನಿವಾಸಿಗಳಿಗೆ ಜಮೀನು ಮಂಜೂರಾಗುತ್ತಿಲ್ಲ ಎಂದು ತಾ. ಪಂ. ಸದಸ್ಯ ಜಯರಾಮ ಹಾಗೂ ಇತರರು ತಿಳಿಸಿದರು. ಇಂತಹ ಸಂದರ್ಭದಲ್ಲಿ ಜಂಟಿ ಸರ್ವೆ ನಡೆಸಿದರೆ ಮಾತ್ರ ಗೊಂದಲ ನಿವಾರಣೆ ಆಗಲಿದೆ ಎಂದು ತಹಶೀಲ್ದಾರ್ ತಿಳಿಸಿದರು. ಸಮಾಜ ಕಲ್ಯಾಣ ಹಾಗೂ ಐಟಿಡಿಪಿ ಅಧಿಕಾರಿಗಳು ಮೂಲನಿವಾಸಿಗಳು ವಾಸಿಸುತ್ತಿರುವ ಪ್ರದೇಶಗಳಿಗೆ ತೆರಳಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ತಿಳಿದುಕೊಂಡು ಕಾರ್ಯ ನಿರ್ವಹಿಸಬೇಕು. ಎಲ್ಲ ಗ್ರಾಮ ಪಂಚಾಯತುಗಳಿಗೂ ಭೇಟಿ ನೀಡಿ ಅವರ ಕುಂದುಕೊರತೆಗಳನ್ನು ಆಲಿಸಬೇಕು ಎಂಧು ಅಧಿಕಾರಿಗಳಿಗೆ ತಹಶೀಲ್ದಾರ್ ಸೂಚಿಸಿದರು.
ತಾಲೂಕು ಸಮಾಜ ಕಲ್ಯಾಣಾಧಿಕಾರಿ ಎಚ್. ಎಂ. ಪಾಟೀಲ್, ಐಟಿಡಿಪಿ ವಿಸ್ತರಣಾಧಿಕಾರಿ ಹೇಮಲತಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಬದಲಿ ರಸ್ತೆಗೆ ತಡೆಯಾಜ್ಞೆ ಸಾಧ್ಯತೆ
ಮಲೆಕುಡಿಯ ಸಮುದಾಯದ ಮೂಲಭೂತ ಸೌಲಭ್ಯಗಳಿಗೆಂದು ಬಿಡುಗಡೆಯಾಗುವ ಹಣ ಯಾವದೇ ಕಾರಣಕ್ಕೂ ಇತರೆಡೆಗೆ ವರ್ಗಾವಣೆಯಾಗಬಾರದು ಈ ಬಗ್ಗೆ ನಿಗಾ ವಹಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಯಿತು. ನೆರಿಯ ಗ್ರಾಮದ ಬಾಂಜಾರುಮಲೆಗೆ ಸಂಪರ್ಕ ಕಲ್ಪಿಸುವ ಬದಲಿ ರಸ್ತೆಗೆ ಸರ್ವೆ ನಡೆಸುವಂತೆ ಜಿಲ್ಲಾಧಿಕಾರಿಯವರು ಸೂಚನೆ ನೀಡಿದ್ದರು ಆದರೆ ಈಗ ಸರ್ವೆ ನಡೆಸುವುದಕ್ಕೆ ಸ್ಥಳೀಯ ಭೂಮಾಲಕ ಗೋಪಾಲ ಗೌಡ ಅವರು ವಿರೋಧ ವ್ಯಕ್ತಪಡಿಸಿ ತಡೆಯಾಜ್ಞೆ ತರುವ ಕಾರ್ಯ ಮಾಡಿದ್ದಾರೆ ಎಂದು ಸಭೆಗೆ ತಿಳಿಸಲಾಯಿತು. ಈ ಬಗ್ಗೆ ಕೂಡಲೇ ಜಿಲ್ಲಾಧಿಕಾರಿಯವರನ್ನು ಸಂಪರ್ಕಿಸಿ ಅಗತ್ಯಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ತಿಳಿಸಿದರು