Advertisement

ಮಲೆ ಮಾದಪ್ಪನ ಹುಂಡಿಯಲ್ಲಿ 2.03 ಕೋಟಿ ರೂ. ಸಂಗ್ರಹ

03:25 PM Jun 19, 2022 | Team Udayavani |

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಪ್ರಕ್ರಿಯೆ ನಡೆದಿದ್ದು, ಕಳೆದ 35 ದಿನಗಳಲ್ಲಿ 2.03 ಕೋಟಿ ನಗದು, 110 ಗ್ರಾಂ ಚಿನ್ನ ಮತ್ತು 3.56 ಕೆ.ಜಿ ಬೆಳ್ಳಿ ಸಂಗ್ರಹವಾಗಿವೆ.

Advertisement

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಖಾಸಗಿ ಬಸ್‌ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿ ಎಣಿಕೆ ಪ್ರಕ್ರಿಯೆ ನಡೆದಿದೆ. ಈ ಬಾರಿ ಕಳೆದ 35 ದಿನಗಳ ಅವಧಿಯಲ್ಲಿ ಮಲೆ ಮಾದಪ್ಪನ ಹುಂಡಿಯಲ್ಲಿ 2,03, 25,354 ( ಎರಡು ಕೋಟಿ ಮೂರು ಲಕ್ಷದ ಇಪ್ಪತ್ತೈದು ಲಕ್ಷದ ಮುನ್ನೂರಐವತ್ತ ನಾಲ್ಕು) ರೂ., 110 ಗ್ರಾಂ ಚಿನ್ನದ ಪದಾರ್ಥ ಗಳು ಮತ್ತು 3.56 ಕೆ.ಜಿ ಬೆಳ್ಳಿ ಸಂಗ್ರಹವಾಗಿವೆ. ಹುಂಡಿ ಎಣಿಕೆ ಪ್ರಕ್ರಿಯೆ ಸಾಲೂರು ಬೃಹನ್ಮಠದ ಶಾಂತಮಲ್ಲಿ ಕಾರ್ಜುನ ಶ್ರೀಗಳ ಸಾನ್ನಿಧ್ಯದಲ್ಲಿ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ಅಧ್ಯಕ್ಷತೆಯಲ್ಲಿ ಜರುಗಿತು.

ಪ್ರಾಧಿಕಾರದ ಉಪಕಾರ್ಯದರ್ಶಿ ಬಸವರಾಜು, ಅಧಿಕಾರಿ ವರ್ಗ ಹಾಗೂ ಸಿಬ್ಬಂದಿ ವರ್ಗ, ಮಲೆ ಮಹದೇಶ್ವರ ಬೆಟ್ಟ ಎಸ್‌ಬಿಐ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next