Advertisement

ಬಿಜೆಪಿ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಗೆ ಕೋವಿಡ್ ಸೋಂಕು ದೃಢ

01:27 PM Sep 03, 2020 | keerthan |

ಕಲಬುರಗಿ: ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.

Advertisement

‘ನಾನು ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಮಾಲೀಕಯ್ಯ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ನಿಮ್ಮ ಹಾರೈಕೆ ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ನಿಮ್ಮೆಲ್ಲರ ಸೇವೆಗೆ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ’ ಎಂದು ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next