Advertisement

ಈಗಲೇ ನಾನು ಸಿಎಂ ನಾನು ಸಿಎಂ ಎಂದು ಹೇಳುವುದು ಸರಿಯಲ್ಲ.. : ಮಲ್ಲಿಕಾರ್ಜುನ ಖರ್ಗೆ

01:14 PM Jul 23, 2022 | Team Udayavani |

ಮೈಸೂರು: ಚುನಾವಣೆ ಫಲಿತಾಂಶಕ್ಕೆ ಮುನ್ನೆವೇ ನಾನು ಸಿಎಂ- ನಾನು ಸಿಎಂ ಎಂದು ಹೇಳುವುದು ಸರಿಯಲ್ಲ. ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಮೈಸೂರಿನಲ್ಲೋ, ಬೆಂಗಳೂರಿನಲ್ಲೋ, ಗುಲ್ಬರ್ಗದಲ್ಲೂ ತೀರ್ಮಾನವಾಗುವುದಿಲ್ಲ. ಪಕ್ಷದ ಹೈಕಮಾಂಡ್ ಅದನ್ನು ತೀರ್ಮಾನ ಮಾಡುತ್ತದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದೊಳಗೆ ಕಚ್ಚಾಟಕ್ಕೆ ತಿರುಗೇಟು ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವತ್ತಿನ ರಾಜಕೀಯ ಪರಿಸ್ಥಿತಿ ಆಧಾರದ ಮೇಲೆ ಹೈಕಮಾಂಡ್ ಯಾರಿಗೆ ನಾಯಕತ್ವಕ್ಕೆ ಕೊಡಬೇಕು ಎಂದು ತೀರ್ಮಾನ ಮಾಡುತ್ತದೆ. ಕಾಂಗ್ರೆಸ್ ಯಾವಾಗಲೂ ಸಾಮೂಹಿಕ ನಾಯಕತ್ವದಲ್ಲೇ ಹೋಗುವುದು. ಈ ಬಾರಿ ಆ ಬಾರಿ ಅಂತಲ್ಲಾ. ನಮ್ಮದು ಯಾವಾಗಲೂ ಸಾಮೂಹಿಕ‌ ನಾಯಕತ್ವ. ಮೊದಲು ಪಕ್ಷವನ್ನು ಅಧಿಕಾರಕ್ಕೆ ತರಬೇಕು ಅದೇ ನಮ್ಮ ಉದ್ದೇಶ ಎಂದರು.

ರಾಜ್ಯ ರಾಜಕಾರಣಕ್ಕೆ ಖರ್ಗೆ ಮರಳುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಅವರು, “ನೀವು ಅವಕಾಶ ಕೊಟ್ಟರೆ (ಮಾಧ್ಯಮದವರು) ಬರುತ್ತೇನೆ. ಎಲ್ಲಾ ಸೇರಿ ಚಾನ್ಸ್ ಕೊಟ್ಟರೆ ನೋಡೋಣಾ ಎಂದರು.

ರಾಜಕಾರಣದಿಂದ ಯಡಿಯೂರಪ್ಪ ನಿವೃತ್ತಿ ವಿಚಾರ‌ವಾಗಿ ಪ್ರತಿಕ್ರಿಯೆ ನೀಡಿದ ಅವರು, ಅದು ಅವರ ವೈಯಕ್ತಿಕ ನಿರ್ಧಾರ. ಅದರ ಬಗ್ಗೆ ನಾನೇನು ಮಾತನಾಡಲ್ಲ. ಎಲ್ಲರಿಗೂ ಅವರದೇ ತೀರ್ಮಾನಗಳನ್ನು ತೆಗೆದುಕೊಳ್ಳುವ ಸ್ವತಂತ್ರ ಇರುತ್ತದೆ. ನಾವು ಯಾರೇ ಇರಲಿ, ಬಿಡಲಿ ದೇಶ ಅಂತೂ ಇರುತ್ತದೆ. ನಾನಿಲ್ಲಾ ಎಂದರೆ ಇನ್ನೊಬ್ಬರು ಬರುತ್ತಾರೆ. ಹಾಗೇ ಯಡಿಯೂರಪ್ಪ ಯೋಚನೆ ಮಾಡಿರಬಹುದು ಎಂದರು.

ಇದನ್ನೂ ಓದಿ:4 ಕೋಟಿ ಜನರು ಈವರೆಗೂ ಒಂದೇ ಒಂದು ಡೋಸ್ ಕೋವಿಡ್ ಲಸಿಕೆ ಪಡೆದಿಲ್ಲ: ಕೇಂದ್ರ ಸರ್ಕಾರ

Advertisement

ಸೋನಿಯಾ ಗಾಂಧಿಗೆ ಇಡಿ ವಿಚಾರಣೆ ವಿಚಾರವಾಗಿ ಮಾತನಾಡಿದ ಅವರು, ಈ ದೇಶಕ್ಕಾಗಿ ಮನೆಯರನ್ನೇ ಕಳೆದು ಕೊಂಡವರು. ಒಂದು ಕೋಟಿ ರೂಪಾಯಿ ಅವ್ಯವಹಾರ ಮಾಡುತ್ತಾರಾ? ಗಾಂಧಿ ಕುಟುಂಬವನ್ನು ವಿಚಾರಣೆಗೆ ಕರೆದ ಕೂಡಲೇ ನಾವು ಮಾನಸಿಕವಾಗಿ ಕುಗ್ಗುವುದಿಲ್ಲ. ಸ್ವಾತಂತ್ರ್ಯ ಹೋರಾಟ ಮಾಡಿ, ಚಳುವಳಿಗಳನ್ನು ತ್ಯಾಗ ಬಲಿದಾನ ಮಾಡಿರುವ ಪಕ್ಷ ಕಾಂಗ್ರೆಸ್. ನಮ್ಮನ್ನು ಬಿಜೆಪಿಯವರು ಮಾನಸಿಕವಾಗಿ ಕುಗ್ಗಿಸಲು ಸಾಧ್ಯವಿಲ್ಲ‌. ಸತ್ಯಾಗ್ರಹವೇ ಮಾಡದವರು, ತ್ಯಾಗ ಬಲಿದಾನ ಗೊತ್ತಿಲ್ಲದ ಬಿಜೆಪಿಯವರಿಂದ ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ. ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಇಂತಹ ಗಿಮಿಕ್ ಗಳನ್ನ ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next