Advertisement
ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುಜರಿ ಅಂಗಡಿಯ ಕಾರ್ಮಿಕರಾದ ನಯಾಜ್ ಮತ್ತು ಈರಪ್ಪ ಎಂಬವರು ಗುರುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
Related Articles
Advertisement
ಮಲ್ಲಾರು ಪಕೀರಣಕಟ್ಟೆಯ ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಸಂಭವಿಸಿದ ಅಗ್ನಿ ದುರಂತ ಮತ್ತು ಅದರಿಂದ ಮೃತಪಟ್ಟ ಇಬ್ಬರಿಗೆ ಕೂಡಲೇ ಪರಿಹಾರ ಧನ ಬಿಡುಗಡೆಗೊಳಿಸುವಂತೆ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ವಿಧಾನ ಸಭೆಯಲ್ಲಿ ಆಗ್ರಹಿಸಿದ್ದಾರೆ.
ಮಂಗಳವಾರ ವಿಧಾನಸಭಾ ಅಧಿವೇಶನದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಘಟನೆಯಲ್ಲಿ ಗುಜರಿ ಅಂಗಡಿಯ ಪಾಲುದಾರ ಸಹಿತ ಇಬ್ಬರು ಮೃತಪಟ್ಟಿದ್ದಾರೆ. ಐದು ಮಂದಿ ಗಾಯಗೊಂಡಿದ್ದಾರೆ. ಆ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳಿಗೆ ಸರಕಾರ ಉಚಿತ ಚಿಕಿತ್ಸೆ ನೀಡಬೇಕಿದೆ ಎಂದು ಅವರು ಒತ್ತಾಯಿಸಿದ್ದರು.
ಶಾಸಕರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಕಾಪುವಿನ ಗುಜರಿ ಅಂಗಡಿಯಲ್ಲಿ ಅನಧಿಕೃತವಾಗಿ ಗ್ಯಾಸ್ ಕಟ್ಟರ್ ಬಳಸಿದ ಪರಿಣಾಮ ಸಿಲಿಂಡರ್ ಸ್ಪೋಟಗೊಂಡು ಅಗ್ನಿ ದುರಂತ ಸಂಭವಿಸಿದೆ. ಮೃತರು ಮತ್ತು ಗಾಯಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಇಲಾಖೆಯಿಂದ ವರದಿ ತರಿಸಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಇಲಾಖಾ ವರದಿ ಆಧರಿಸಿ, ಮೃತರಿಗೆ ಪರಿಹಾರ ಮತ್ತು ಗಾಯಾಳುಗಳ ಉಚಿತ ಚಿಕಿತ್ಸೆ ಬಗ್ಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದರು.