Advertisement
ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟ ಗ್ರಾಪಂ ವ್ಯಾಪ್ತಿಯ ಮಲ್ಲೇಕಾವು ಗ್ರಾಮದ ಅಂಚೆ ಕಚೇರಿಯ ಅಂಚೆ ಪಾಲಕ ನಾಗೇಂದ್ರ ಎಂಬಾತ ಕಳೆದ ೪೫ ದಿನಗಳಿಂದ ಕತ್ಯವ್ಯಕ್ಕೆ ಗೈರುಹಾಜರಿ. ಹತ್ತಾರು ಗ್ರಾಮಗಳಿಗೆ ತುರ್ತುಸೇವೆ ನೀಡಬೇಕಾದ ಅಂಚೆ ಪಾಲಕ ನಾಗೇಂದ್ರ ಕರ್ತವ್ಯಕ್ಕೆ ಗೈರಾಗಿ ನೂರಾರು ಸಮಸ್ಯೆಗಳು ಸೃಷ್ಟಿಯಾಗಿವೆ.
ಮಲ್ಲೇಕಾವು ಅಂಚೆ ಇಲಾಖೆಯ ಅಂಚೆ ಪಾಲಕನ ತಂದೆಯ ಕೆಲಸವನ್ನು ಮಗ ನಾಗೇಂದ್ರನಿಗೆ ನೀಡಲಾಗಿದೆ. ನಾಗೇಂದ್ರ ತನ್ನ ಕೆಲಸವನ್ನೇ ಮರೆತು ಸಂಬಳ ಪಡೆಯುವುದಕ್ಕೇ ಮಾತ್ರ ಸೀಮಿತ ಆಗಿದ್ದಾರೆ. ಅಂಚೆ ಇಲಾಖೆಯ ದಾಖಲೆಗಳು ತನ್ನ ಮನೆಯಲ್ಲಿಯೇ ಶೇಖರಣೆ ಮಾಡಿ ಕೊಂಡಿರುವ ಆರೋಪವು ಸಹ ಇದೆ. ೩೦ದಿನದ ಹಿಂದೆಯೇ ತನಿಖೆ ನಡೆಸಿರುವ ಅಂಚೆ ನಿರೀಕ್ಷಕ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಪರಿಣಾಮ ಸಮಸ್ಯೆಯು ದ್ವಿಗುಣವಾಗಿದೆ.
Related Articles
Advertisement
ಅಂಚೆ ನಿರೀಕ್ಷಕನ ದಿವ್ಯ ನಿರ್ಲಕ್ಷ..
ಕೊರಟಗೆರೆಯ ೧೬ಅಂಚೆ ಉಪಕಚೇರಿಗಳಿಗೆ ಹರ್ಷ ಎಂಬುವರೇ ಅಂಚೆ ನಿರೀಕ್ಷಕ. ತುಮಕೂರು ನಗರಕ್ಕೆ ಮಾತ್ರ ಸೀಮಿತವಾಗಿದ್ದು ಕೊರಟಗೆರೆಗೆ ಸದಾ ಗೈರು. ಇವರು ಕೊರಟಗೆರೆಗೆ ಬರೋದು ಯಾರಿಗೂ ಗೊತ್ತಾಗಲ್ಲ-ಮತ್ತೇ ಹೋಗುವ ದಿನಚರಿಯೇ ತಿಳಿಯೊಲ್ಲ. ಮಲ್ಲೇಕಾವು ಕಚೇರಿಗೆ ೩೦ದಿನದ ಹಿಂದೆಯಷ್ಟೆ ಬೇಟಿನೀಡಿ ಹತ್ತಾರು ಸಮಸ್ಯೆಯನ್ನು ಕಣ್ಣಾರೇ ಕಂಡ್ರು ಕ್ರಮ ಕೈಗೊಳ್ಳುವಲ್ಲಿ ವಿಫಲ. ಅಂಚೆ ಇಲಾಖೆಯು ಇವರ ಮೇಲೆ ಮೊದಲು ಶಿಸ್ತು ಕ್ರಮ ಜರುಗಿಸಬೇಕಿದೆ.
ಅಂಚೆ ಇಲಾಖೆ ಮೂಲಕ ಜನರಿಗೆ ತಲುಪುವ ಯಾವುದೇ ದಾಖಲೆ ನಿಗಧಿತ ಸಮಯಕ್ಕೆ ಸಿಗುತ್ತಿಲ್ಲ. ಅಂಚೆ ಪಾಲಕ ಕಳೆದ ೪೫ದಿನಗಳಿಂದ ಗೈರು ಹಾಜರಾಗಿ ಸಮಸ್ಯೆ ಸೃಷ್ಟಿಯಾಗಿದೆ. ನೂರಾರು ಜನರ ದಾಖಲೆಗಳು ಅಂಚೆ ಇಲಾಖೆಯಲ್ಲಿ ಕೊಳೆಯುತ್ತೀವೆ. ಕೊರಟಗೆರೆಯ ಅಂಚೆ ನಿರೀಕ್ಷಕರಿಗೆ ಸ್ಥಳೀಯರು ದೂರು ನೀಡಿದ್ರು ಪ್ರಯೋಜನ ಆಗಿಲ್ಲ.– ರಾಘವೇಂದ್ರ. ಸ್ಥಳೀಯ ನಿವಾಸಿ. ಸಿ.ಎನ್.ದುರ್ಗ ಮಲ್ಲೇಕಾವು ಅಂಚೆ ಪಾಲಕ ಗೈರು ಹಾಜರಿಯ ಬಗ್ಗೆ ಈಗಾಗಲೇ ತನಿಖೆ ನಡೆದಿದೆ. ಅಂಚೆ ಪಾಲಕ ನಾಗೇಂದ್ರಗೆ ಕಾರಣ ಕೇಳಿ ಶೋಕಾಸ್ ನೊಟೀಸ್ ಜಾರಿ ಮಾಡಲಾಗಿದೆ. ತನಿಖೆಯಲ್ಲಿ ಲೋಪ ದೋಷ ಕಂಡು ಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ತುರ್ತುಸೇವೆಗೆ ಸಮಸ್ಯೆ ಆಗದಂತೆ ಕ್ರಮಕ್ಕೆ ಈಗಾಗಲೇ ಅಂಚೆ ನಿರೀಕ್ಷಕರಿಗೆ ಸೂಚಿಸಿದ್ದೇನೆ.
– ಗೋವಿಂದರಾಜು. ಅಧೀಕ್ಷಕ. ಅಂಚೆ ಇಲಾಖೆ. ತುಮಕೂರು ಇದನ್ನೂ ಓದಿ: ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸದೆ ಸುಪ್ರಿಯಾ ಸುಳೆ ಸೀರೆಗೆ ಬೆಂಕಿ