Advertisement

ರಾಜ್ಯಸಭೆ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಟಿಕೆಟ್

02:45 PM Jun 05, 2020 | keerthan |

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆ ಚುನಾವಣೆಗೆ ಅಧಿಕೃತ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಿದೆ.

Advertisement

ಜೂನ್ 19ರಂದು ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಟಿಕೆಟ್ ನೀಡಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯಸಭೆಗೆ ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿಸಿದೆ.

ಕಾಂಗ್ರೆಸ್ ಗೆ ರಾಜ್ಯಸಭೆಯಲ್ಲಿ ಮೋದಿ ಸರಕಾರವನ್ನು ಎದುರು ಹಾಕಿಕೊಳ್ಳುವ ಸಾಮರ್ಥ್ಯಯುಳ್ಳ ಅನುಭವಿ ನಾಯಕರ ಅಗತ್ಯವಿದ್ದು, ಅದಕ್ಕಾಗಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಅಯ್ಕೆ ಮಾಡಲಾಗುತ್ತಿದೆ ಎನ್ನಲಾಗಿದೆ. ಮಲ್ಲಿಕಾರ್ಜುನ್ ಖರ್ಗೆ ಅವರ ಆಯ್ಕೆ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಕೆಲಸ ಮಾಡಿದ್ದು, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಅವರ ಬೆಂಬಲವೂ ಇದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಗಳಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದರು. ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದ ಉಮೇಶ್ ಜಾಧವ್ ಅವರ ವಿರುದ್ಧ ಖರ್ಗೆ ಸೋಲು ಕಂಡಿದ್ದರು. ಹಾಗಾಗಿ ಸದ್ಯ ರಾಜ್ಯ ಸಭೆ ಮೂಲಕ ದೆಹಲಿ ರಾಜಕೀಯದ ಮೇಲೆ ಖರ್ಗೆ ಕಣ್ಣಿಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next