Advertisement

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

12:04 PM Oct 26, 2022 | Team Udayavani |

ನವದೆಹಲಿ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದ ಮಲ್ಲಿಕಾರ್ಜುನ್ ಖರ್ಗೆ ಬುಧವಾರ (ಅಕ್ಟೋಬರ್ 26) ಅಧಿಕಾರ ಸ್ವೀಕರಿಸಿದ್ದಾರೆ.

Advertisement

ಇದನ್ನೂ ಓದಿ:ಪುತ್ತೂರು: ಕಂಠ ಪೂರ್ತಿ ಕುಡಿದು ರಿಕ್ಷಾದಲ್ಲೇ ಮಲಗಿದ ಚಾಲಕ: ಆಟೋ ಸೀಜ್

ಕಾಂಗ್ರೆಸ್ ನ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಇದರೊಂದಿಗೆ 24 ವರ್ಷಗಳ ನಂತರ ಕಾಂಗ್ರೆಸ್ ನ ಉನ್ನತ ಹುದ್ದೆಗೆ ಗಾಂಧಿಯೇತರ ವ್ಯಕ್ತಿ (ಖರ್ಗೆ) ಅಧ್ಯಕ್ಷರಾದಂತಾಗಿದೆ.

ಇಂದು ಸೋನಿಯಾ ಗಾಂಧಿ ಅವರು ಎಐಸಿಸಿ ಕೇಂದ್ರ ಕಚೇರಿಯಲ್ಲಿ ಚುನಾವಣಾ ಸರ್ಟಿಫಿಕೇಟ್ ಅನ್ನು ಮಲ್ಲಿಕಾರ್ಜುನ್ ಖರ್ಗೆ(80ವರ್ಷ) ಅವರಿಗೆ ಹಸ್ತಾಂತರಿಸಿದರು. ಪಕ್ಷದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ ಚಲಾಯಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡುತ್ತ ತಿಳಿಸಿದರು.

“ಇಂದು ಸಾಮಾನ್ಯ ಕಾರ್ಮಿಕನೊಬ್ಬನ ಮಗನನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ನಾನು ನನ್ನ ಕಾರ್ಯ ಮತ್ತು ಅನುಭವದ ಮೂಲಕ ಪಕ್ಷಕ್ಕಾಗಿ ದುಡಿಯುತ್ತೇನೆ” ಎಂದು ಖರ್ಗೆ ಹೇಳಿದರು.

Advertisement

ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ)ಯ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರು, ಸಂಸದರು, ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ಸಿಎಲ್ ಪಿ ಮುಖಂಡರು, ಮಾಜಿ ಮುಖ್ಯಮಂತ್ರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next