ಶೃಂಗೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗುವುದಾದಲ್ಲಿ ನನ್ನ ಪೂರ್ಣ ಬೆಂಬಲವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಟಿಕೆಟ್‌ಗೆ ಎಲ್ಲ ಕ್ಷೇತ್ರದಲ್ಲೂ ಪೈಪೋಟಿ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದ್ದು, ಸಹಜವಾಗಿ ಅಭ್ಯರ್ಥಿಗಳ ಪಟ್ಟಿ ದೊಡ್ಡದಿದೆ.
ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ. ಖರ್ಗೆ ಪಕ್ಷದ ಹಿರಿಯ ನಾಯಕರಾಗಿದ್ದು, ಅವರು ಮುಖ್ಯಮಂತ್ರಿಯಾಗುವುದರಲ್ಲಿ ಯಾರ ವಿರೋಧವೂ ಇಲ್ಲ ಎಂದರು.
ಕಾಂಗ್ರೆಸ್‌ನಿಂದ ಚಿಕ್ಕಮಗಳೂರಿನಿಂದ ಎಚ್.ಡಿ. ತಮ್ಮಯ್ಯ ತಮ್ಮ ಬೆಂಬಲಿಗರೊಂದಿಗೆ, ಕಡೂರಿನ ಗೋಪಿಕೃಷ್ಣ, ಶಿವಮೊಗ್ಗದ ಪ್ರಸನ್ನ ಕುಮಾರ್ ಆಗಮಿಸಿದ್ದರು. ತಮ್ಮ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಘೋಷಣೆ ಕೂಗಿದ ಕಾರ್ಯಕರ್ತರ ವರ್ತನೆ ಬಗ್ಗೆ ಸಿಡಿಮಿಡಿಗೊಂಡ ಡಿಕೆಶಿ, ದೇವಿ ದರ್ಶನಕ್ಕೆ ಬಂದಾಗ ಇಂತಹ ವರ್ತನೆ ಸರಿಯಲ್ಲ ಎಂದರು.