Advertisement

ಖರ್ಗೆ, ಪರಂಗೆ ಸಿಎಂ ಸ್ಥಾನ ತಪ್ಪಿಸಿದ್ದೇ ಸಿದ್ದು: ರಮೇಶ

11:56 PM Dec 06, 2021 | Team Udayavani |

ರಾಯಬಾಗ: ಕಾಂಗ್ರೆಸ್ಸಿನ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಜಿ. ಪರಮೇಶ್ವರ ಅವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಿದ್ದೇ ಮಾಜಿ ಸಿಎಂ ಸಿದ್ದರಾಮಯ್ಯ. ಅಂಥವರು ಈಗ ಸಾಮಾಜಿಕ ನ್ಯಾಯ, ಸಂವಿಧಾನ ಮತ್ತು ಅಂಬೇಡ್ಕರ್‌ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

Advertisement

ಪಟ್ಟಣದ ಮಹಾವೀರ ಸಭಾಭವನದಲ್ಲಿ ಸೋಮವಾರ ಜರಗಿದ ಗ್ರಾ.ಪಂ. ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಬಗ್ಗೆ ನಮಗೆ ಅಪಾರ ಗೌರವವಿದೆ. ಈಗಲೂ ಅವರು ನಮ್ಮ ನಾಯಕರು. ಆದರೆ 3 ತಿಂಗಳುಗಳಿಂದ ಯಾರದೋ ಒತ್ತಡಕ್ಕೆ ಮಣಿದು ಸುಳ್ಳು ಹೇಳುತ್ತಿದ್ದಾರೆ ಎಂದರು.

ಇದನ್ನೂ ಓದಿ:ಕದ್ರಿ ಗೋಪಾಲನಾಥ್ ಪುಣ್ಯಸ್ಮರಣೆ ; ಪತ್ನಿ ಆರೋಗ್ಯ ಏರುಪೇರು; ಡಿಸಿಯಿಂದಲೇ ಚಿಕಿತ್ಸೆ

ಬೆಳಗಾವಿಯಲ್ಲಿ ವಿವೇಕ ರಾವ್‌ಗೆ ಟಿಕೆಟ್‌ ನೀಡಿದ್ದರೆ, ನಾವು ಲಖನ್‌ನನ್ನು ಚುನಾವಣೆಗೆ ನಿಲ್ಲಿಸುತ್ತಿರಲಿಲ್ಲ. ಅವರ ಕುಟುಂಬದೊಂದಿಗೆ ಸುಮಾರು 40 ವರ್ಷಗಳ ಸ್ನೇಹವಿದೆ ಎಂದು ಜಾರಕಿಹೊಳಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next