Advertisement

ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಇಂದು

08:24 AM Oct 26, 2022 | Team Udayavani |

ಬೆಂಗಳೂರು: ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕಾರ ಸ್ವೀಕರಿಸಲಿದ್ದಾರೆ. ನವದೆಹಲಿಯ ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಧಿಕಾರವನ್ನು ಹಸ್ತಾಂತರಿಸಲಿದ್ದಾರೆ.

Advertisement

ಕಾಂಗ್ರೆಸ್‌ನ ಕೇಂದ್ರೀಯ ಚುನಾವಣಾ ಪ್ರಾಧಿಕಾರದ ಮುಖ್ಯಸ್ಥ ಮಧುಸೂದನ ಮಿಸಿŒ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಬಗ್ಗೆ ಪ್ರಮಾಣಪತ್ರವನ್ನು ಖರ್ಗೆಯವರಿಗೆ ಹಸ್ತಾಂತರಿಸಲಿದ್ದಾರೆ. ವಯನಾಡ್‌ ಸಂಸದ ರಾಹುಲ್‌ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಉಪಸ್ಥಿತರಿರಲಿದ್ದಾರೆ.

ರಾಜ್ಯದಿಂದ ನಾಯಕರ ದಂಡೇ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌, ಕೇಂದ್ರದ ಮಾಜಿ ಸಚಿವರಾದ ವೀರಪ್ಪ ಮೊಯ್ಲಿ, ಕೆ.ಎಚ್‌.ಮುನಿಯಪ್ಪ, ರೆಹಮಾನ್‌ ಖಾನ್‌, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಮಾಜಿ ಸಚಿವ ಎಚ್‌.ಕೆ.ಪಾಟೀಲ್‌ ಸೇರಿ ನಾಯಕರ ದಂಡು ನವದೆಹಲಿಗೆ ತೆರಳಿದೆ.

Advertisement

Udayavani is now on Telegram. Click here to join our channel and stay updated with the latest news.

Next