ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಅವರ ರಾಜ್ಯಸಭಾ ಸದಸ್ಯತ್ವದ ಅವಧಿ ಫೆ.15ರಂದು ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಸಭಾ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ನೇಮಕ ಮಾಡಲು ಸಿದ್ಧತೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಕಡಬ: ಮರವೇರಿ ಕುಳಿತಿರುವ ಚಿರತೆಯನ್ನು ಸೆರೆ ಹಿಡಿಯಲು ಭರದ ಸಿದ್ಧತೆ
ಗುಲಾಂ ನಬಿ ಅವರ ಸ್ಥಾನಕ್ಕೆ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಹೆಸರಿಸಿದ್ದು, ಈ ಬಗ್ಗೆ ರಾಜ್ಯಸಭಾ ಅಧ್ಯಕ್ಷರಿಗೆ ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ.
ಗುಲಾಂ ನಬಿ ಆಜಾದ್ ಸೇರಿದಂತೆ ನಾಲ್ವರು ಸದಸ್ಯರು ರಾಜ್ಯಸಭೆಯಿಂದ ಮಂಗಳವಾರ(ಫೆ.15) ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಾಜ್ಯಸಭೆಯಲ್ಲಿ ಆಜಾದ್ ಅವರ ಬೀಳ್ಕೊಡುಗೆ ವೇಳೆ ಭಾವುಕರಾಗಿ ಮಾತನಾಡಿ ಶುಭಹಾರೈಸಿದ್ದರು.
ಗುಲಾಂ ನಬಿ ಆಜಾದ್ ಅವರು ಕೇವಲ ರಾಜಕೀಯದ ಬಗ್ಗೆ ಮಾತ್ರ ಕಾಳಜಿ ಹೊಂದಿಲ್ಲವಾಗಿತ್ತು, ಅವರು ದೇಶ ಮತ್ತು ರಾಜ್ಯಸಭೆ ಬಗ್ಗೆಯೂ ಕಾಳಜಿ ಹೊಂದಿರುವುದಾಗಿ ಪ್ರಧಾನಿ ಮೋದಿ ಹೇಳಿದರು.
ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಪಕ್ಷವನ್ನು ಮುನ್ನಡೆಸಲು ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದೆ. ಗುಲಾಂ ನಬಿ ಅವರ ಸ್ಥಾನಕ್ಕೆ ಖರ್ಗೆ ಅವರು ಸೂಕ್ತ ಮತ್ತು ಸಮರ್ಥ ನಾಯಕರಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ನಾಯಕರು ಮತ್ತು ರಾಜ್ಯಸಭೆಯಲ್ಲಿ ವಿಪಕ್ಷ ನಾಯಕರಾಗಿದ್ದರು. ಇದೀಗ 2021ರ ಫೆ.15ರಂದು ಆಜಾದ್ ರಾಜ್ಯಸಭೆಯಿಂದ ನಿವೃತ್ತಿಯಾಗುತ್ತಿದ್ದಾರೆ.