Advertisement
ಎರಡು ಬಾರಿ ಸಂಸತ್ ಸದಸ್ಯರಾಗಿ ಹಾಗೂ ಒಂದು ಅವಧಿಗೆ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾಗಿದ್ದ ಅವರು ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ಸಂಸತ್ತಿನಲ್ಲಿ ದನಿ ಎಬ್ಬಿಸಿದ್ದರು.
ಆದರೆ, ಪಕ್ಷ ಹಾಗೂ ಗಾಂಧಿ ಕುಟುಂಬ ನಿಷ್ಠೆ ವಿಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಸೋನಿಯಾ ಗಾಂಧಿ ಕೂಡ ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ ಎನ್ನಲಾಗುತ್ತಿದೆ. ಐದು ವರ್ಷ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾಗಿ ಸಂಸತ್‌ನಲ್ಲಿ ಹೋರಾಟ ಮಾಡಿ ಖರ್ಗೆ ಎಲ್ಲರ ವಿಶ್ವಾಸಕ್ಕೆ ಪಾತ್ರರಾಗಿದ್ದರು. ಹೀಗಾಗಿ ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಅವರ ಹೆಸರೂ ಮುಂಚೂಣಿಯಲ್ಲಿದೆ. ಈ ಹಿಂದೆಯೂ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಕೇಳಿಬಂದಿತ್ತು. ಆದರೆ ವಯೋಮಾನದ ಕಾರಣಕ್ಕೆ ಪ್ರವಾಸ ನಡೆಸುವುದು ಕಷ್ಟ ಆಗಬಹುದು ಎಂದು ಖರ್ಗೆ ಅವರು ವರಿಷ್ಠರಿಗೆ ತಿಳಿಸಿದ್ದರು. ಈಗ ವರಿಷ್ಠರು ಖರ್ಗೆಗೆ ನಾಯಕತ್ವ ವಹಿಸಲು ನಿರ್ಧರಿಸಿದರೆ ಒಪ್ಪಿಕೊಳ್ಳುವುದು ಅನಿವಾರ್ಯ ಆಗಬಹುದು ಎನ್ನಲಾಗುತ್ತಿದೆ.
Related Articles
ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸಹಿತ ಕೆಲವರು ನಾಯಕತ್ವ ಬದಲಾವಣೆಯ ಮಾತಿಗೆ ಬೇಸರಗೊಂಡಿದ್ದು, ಗಾಂಧಿ ಕುಟುಂಬವೇ ಮುಂದುವರಿಯಬೇಕು ಎಂದು ಆಗ್ರಹಿಸಿದ್ದಾರೆ.
Advertisement